News Karnataka Kannada
Friday, May 03 2024
ಬೆಂಗಳೂರು ನಗರ

ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ನಾಳೆಯಿಂದ ಮಳೆ ಸಾಧ್ಯತೆ

Rain
Photo Credit :

ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ನಾಳೆಯಿಂದ ಹಿಂದೂ ಮಹಾಸಾಗರ ಹಾಗೂ ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದಾಗಿ  ಮಳೆ ಬರುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಬಗ್ಗೆ ಮಾಹಿತಿ ನೀಡಿರುವಂತ ಹವಾಮಾನ ಇಲಾಖೆಯು,  ಮಾರ್ಚ್ 17ರಂದು ಮೈಸೂರು ಹಾಗೂ ಕೊಡಗು ಜಿಲ್ಲೆಗಳ ಕೆಲವೆಡೆ ಮಳೆಯಾಗಲಿದೆ. ಮಾರ್ಚ್ 18ರಂದು ಮೈಸೂರು, ಕೊಡಗು, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಮಳೆ ಬೀಳುವ ಸಂಭವವಿದೆ ಎಂದು ಹೇಳಿದೆ.

ರಾಜ್ಯದ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಿಂದೂ ಮಹಾಸಾಗರ, ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ಮಳೆಯಾಗುವ ನಿರೀಕ್ಷೆ ಇದೆ ಎಂದು ಮುನ್ಸೂಚನೆ ನೀಡಿದೆ.

ಇನ್ನೂ ಮಾರ್ಚ್ 19ರಂದು ಮೈಸೂರು ಸುತ್ತಲಿನ ಜಿಲ್ಲೆಗಳಲ್ಲಿ ಹಾಗೂ ಪಶ್ಚಿಮಘಟ್ಟದ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು