ವಿದೇಶದಿಂದ ಬೆಂಗಳೂರಿಗೆ ಬಂದ 8 ಪ್ರಯಾಣಿಕರಲ್ಲಿ ಕೋವಿಡ್ ಪತ್ತೆ

ಬೆಂಗಳೂರು :  ಕಳೆದ ಮೂರು ದಿನಗಳಿಂದ ವಿದೇಶದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿರುವ ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ಕಂಡುಬರುತ್ತಿರುವುದು ಆತಂಕವನ್ನು ಹೆಚ್ಚಿಸಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಲಂಡನ್‍ನಿಂದ ಆಗಮಿಸಿದ ಎರಡು ಪ್ರತ್ಯೇಕ ಹಾಗೂ ಪ್ಯಾರೀಸ್‍ನಿಂದ ಆಗಮಿಸಿ ಒಬ್ಬರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಲಂಡನ್‍ನಿಂದ ಬಂದ 56 ವರ್ಷದ, 21 ವರ್ಷದ, 43 ವರ್ಷದ ಮೂವರು ಪುರುಷರಲ್ಲಿ , 39 ವರ್ಷದ ಮಹಿಳೆಯೊಬ್ಬರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.

ಅಲ್ಲದೆ 29 ಮತ್ತು 26 ವರ್ಷದ ಪುರುಷ ಪ್ರಯಾಣಿಕರಿಬ್ಬರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದರೆ, ಪ್ಯಾರೀಸ್‍ನಿಂದ ಆಗಮಿಸಿದ 24 ವರ್ಷದ ಪುರುಷ, 65 ವರ್ಷದ ಮಹಿಳೆ ಹಾಗೂ 12 ವರ್ಷದ ಬಾಲಕಿಯಲ್ಲಿ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದೆ.

ಕಳೆದ ಮೂರು ದಿನಗಳಿಂದ ನಿರಂತರವಾಗಿ ವಿದೇಶದಿಂದ ಆಗಮಿಸುತ್ತಿರುವ ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ಕಂಡು ಬರುತ್ತಿರುವುದು ಜನರಲ್ಲಿನ ಆತಂಕವನ್ನು ಇಮ್ಮಡಿಗೊಳಿಸಿದೆ. ಕೋವಿಡ್ ಸೋಂಕಿತ ಪ್ರಯಾಣಿಕರನ್ನು ನಗರದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಅಕೃತ ಮೂಲಗಳು ತಿಳಿಸಿವೆ.

Sneha Gowda

Recent Posts

‘ರೇವ್ ಪಾರ್ಟಿ’ ಮೇಲೆ ಸಿಸಿಬಿ ದಾಳಿ; ನಟಿ ಹೇಮಾ ಸೇರಿ ಐವರು ಅರೆಸ್ಟ್

ಆರ್ ಫಾರ್ಮ್ ಹೌಸ್ ನಲ್ಲಿ ರೇವ್​ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಪಾರ್ಟಿ ಆಯೋಜಕ ವಾಸು,…

12 mins ago

ಆನೆಯ ಕೂಡುದಂತಕ್ಕೆ ಕತ್ತರಿ ಪ್ರಯೋಗ ಸಕ್ಸಸ್

ಬಂಡೀಪುರದಲ್ಲಿ ಸೆರೆಹಿಡಿಯಲಾಗಿದ್ದ ಆನೆಯ ಕೂಡುದಂತಕ್ಕೆ ಕತ್ತರಿ ಪ್ರಯೋಗ ಮಾಡಿರುವುದು ಸಕ್ಷಸ್ ಆಗಿದೆ. ಕೂಡು ದಂತದಿಂದ ಆಹಾರ ಸೇವಿಸಲಾಗದೆ ಪರದಾಡುತ್ತಿದ್ದ ಆನೆ…

13 mins ago

ಮತಗಟ್ಟೆ ದ್ವಂಸ ಪ್ರಕರಣ : ಬಿಡುಗಡೆಗೊಂಡ ಗ್ರಾಮಸ್ಥರಿಗೆ ಎನ್. ಮಹೇಶ್ ಸಾಂತ್ವಾನ

ಏಪ್ರಿಲ್ 26 ರಂದು ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ…

30 mins ago

ಚುನಾವಣಾ ಕರ್ತವ್ಯದಲ್ಲಿದ್ದ ಬಿಎಸ್‌ಎಫ್ ಯೋಧನಿಂದ ಲೈಂಗಿಕ ಕಿರುಕುಳ

ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್‌ಎಫ್ ಯೋಧನನ್ನು ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ…

43 mins ago

ಮೇಯುತ್ತಿದ್ದ ಕುರಿಗಳ ಮೇಲೆ ನಾಯಿಗಳ ದಾಳಿ : ಹತ್ತು ಕುರಿಗಳು ಬಲಿ

ಜಮೀನಿನಲ್ಲಿ ಮೇಯುತ್ತಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ನಾಯಿಗಳ ಹಿಂಡು ಹತ್ತು ಕುರಿಗಳನ್ನ ಕೊಂದುಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ…

44 mins ago

ಹೆಲಿಕಾಪ್ಟರ್ ದುರಂತ : ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು

 ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರದಿಂದ ನಡೆಯುತ್ತಿದ್ದ ಗಂಟೆಗಳ ಕಾರ್ಯಾಚರಣೆ…

1 hour ago