ಬೆಂಗಳೂರು : ವಿದ್ಯಾಥಿರ್ಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಶಾಲಾ ಸಮವಸ್ತ್ರ ಇಲ್ಲದೆ, ಕಲರ್ ಡ್ರೆಸ್ನಲ್ಲಿ ಬಂದರೂ ಅವಕಾಶ ನೀಡುವುದಾಗಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಸೋಮವಾರ ವಿಧಾನ ಪರಿಷತ್ನಲ್ಲಿ ಶೂನ್ಯವೇಳೆ ಕಾಂಗ್ರೆಸ್ನ ಪ್ರಕಾಶ್ ರಾಥೋಡ್, ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಲು ವಿದ್ಯಾಥಿರ್ಗಳಿಗೆ ಸಮವಸ್ತ್ರ ಕಡ್ಡಾಯ ಮಾಡಿರುವ ನಿಯಮವನ್ನು ಸಡಿಲ ಮಾಡುವಂತೆ ಒತ್ತಾಯಿಸಿದರು.
ಇದಕ್ಕೆ ಉತ್ತರಿಸಿದ ಸಚಿವರು, ಮೊದಲಿನಿಂದಲೂ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ ಮಾಡಲಾಗಿದೆ. ಒಂದು ವೇಳೆ ಸಮವಸ್ತ್ರ ಇಲ್ಲದಿದ್ದ ಪಕ್ಷದಲ್ಲಿ ಕಲರ್ ಡ್ರೆಸ್ನಲ್ಲಿ ಬಂದರೂ ಅವಕಾಶ ನೀಡುತ್ತೇವೆ ಎಂದರು.