ಬೆಂಗಳೂರು : ನಾಳೆಯಿಂದ ರಾಜ್ಯದಲ್ಲಿ ಪಿಯುಸಿ, ಪದವಿ ಕಾಲೇಜುಗಳು ಆರಂಭವಾಗಲಿವೆ. ವಿದ್ಯಾರ್ಥಿಗಳು ಯಾವುದೇ ಕೇಸರಿ ಶಾಲು, ಹಿಜಾಬ್ ಧರಿಸಿ ಶಾಲೆಗೆ ಬರುವಂತಿಲ್ಲ ಎಂದು ಶಿಕ್ಷಣ ಸಚಿವ ನಾಗೇಶ್ ತಿಳಿಸಿದ್ದಾರೆ.
ನಾಳೆಯಿಂದ ರಾಜ್ಯದಲ್ಲಿ ಪೊಲೀಸ್ ಭದ್ರತೆಯಲ್ಲಿ ಪಿಯುಸಿ, ಪದವಿ ಕಾಲೇಜುಗಳು ಆರಂಭವಾಗಲಿವೆ. ವಿದ್ಯಾರ್ಥಿಗಳು ಯಾವುದೇ ಕೇಸರಿ ಶಾಲು, ಹಿಜಾಬ್ ಧರಿಸಿ ಶಾಲೆಗೆ ಬರುವಂತಿಲ್ಲ. ಎಲ್ಲಾ ವಿದ್ಯಾರ್ಥಿಗಳು ಹೈಕೋರ್ಟ್ ಆದೇಶಕ್ಕೆ ಬೆಲೆ ಕೊಡಬೇಕು. ಈ ಬಗ್ಗೆ ವಿದ್ಯಾರ್ಥಿಗಳ ಮನವೊಲಿಕೆ ಕೆಲಸವನ್ನು ಸಂಸ್ಥೆಗಳು ಮಾಡುತ್ತಿವೆ. ಯಾರು ರಾಜಕೀಯ ನಾಯಕರ ಮಾತಿಗೆ ಬೆಲೆ ಕೊಡಬೇಡಿ ಎಂದು ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ನಾಗೇಶ್ ಮನವಿ ಮಾಡಿದ್ದಾರೆ.