ಬೆಂಗಳೂರು ನಗರ

ವಿದ್ಯುತ್ ದರ ಪರಿಷ್ಕರಣೆ ವಿಚಾರಕ್ಕೆ ಇಂದು ತಾರ್ಕಿಕ ಅಂತ್ಯ: ಸಿಎಂ ಮಹತ್ವದ ಸಭೆ

ಬೆಂಗಳೂರು : ಕಳೆದ ನಾಲ್ಕೈದು ತಿಂಗಳಿಂದ ಚರ್ಚೆಯಲ್ಲಿರುವ ವಿದ್ಯುತ್ ದರ ಪರಿಷ್ಕರಣೆ ವಿಚಾರಕ್ಕೆ ಇಂದು ತಾರ್ಕಿಕ ಅಂತ್ಯ ಸಿಗುವ ಸಾಧ್ಯತೆ ಇದ್ದು, ಏಪ್ರಿಲ್ ಮಧ್ಯಭಾಗದಲ್ಲಿ ಬೆಲೆ ಹೆಚ್ಚಳದ ನಿರೀಕ್ಷೆಯಿದೆ.

ಸಿಎಂ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸೋಮವಾರ ಬೆಳಗ್ಗೆ 10 ಗಂಟೆಗೆ ಕೆಇಆರ್ಸಿ ಸಭೆ ನಿಗದಿಯಾಗಿದೆ. ಈ ಸಭೆಯಲ್ಲಿ ವಿದ್ಯುತ್ ಪರಿಷ್ಕರಣೆಗೆ ಸಂಬಂಧಪಟ್ಡ ಅಂತಿಮ ಹಂತದ ಚರ್ಚೆಗಳು ನಡೆಯುತ್ತವೆ ಎಂದು ತಿಳಿದು ಬಂದಿದೆ.

ಕೃಷಿ, ಕೈಗಾರಿಕೆ, ವಾಣಿಜ್ಯ ಹಾಗೂ ಗೃಹ ಬಳಕೆ ವಿದ್ಯುತ್ ದರ ಪರಿಷ್ಕರಣೆಗೆ ಸಂಬಂಧಪಟ್ಟಂತೆ ಕೆಪಿಟಿಸಿಎಲ್ ನ ಐದು ಕಂಪನಿಗಳು ಈಗಾಗಲೇ ಸರಕಾರಕ್ಕೆ ತಮ್ಮ ಶಿಫಾರಸ್ಸನ್ನು ನೀಡಿದೆ. ಬೆಲೆ ಏರಿಕೆ ಅನಿವಾರ್ಯ ಎಂದು ಸರಕಾರ ಈಗಾಗಲೇ ಸ್ಪಷ್ಡಪಡಿಸಿದೆ.

ಈ ಮಧ್ಯೆ ಕೆಇಆರ್ ಸಿ ಆಧ್ಯಕ್ಷರ ಆಯ್ಕೆಗೂ ಸರ್ಕಸ್ ನಡೆಯುತ್ತಿದೆ. ರಾಜ್ಯದ ಮುಖ್ಯಕಾರ್ಯದರ್ಶಿ ರವಿಕುಮಾರ್ ಈ ಹುದ್ದೆ ಬಯಸಿ ಅರ್ಜಿ ಸಲ್ಲಿಸಿದ್ದು, ಆಯ್ಕೆ ಸಮಿತಿಯಿಂದ ಹೊರ ಬಂದಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಈ ಎರಡು ವಿಚಾರಗಳು ಬಗೆಹರಿಯಲಿವೆ ಎಂದು ಸಿಎಂ‌ ಕಚೇರಿ‌ ಮೂಲಗಳು ತಿಳಿಸಿವೆ.

Gayathri SG

Recent Posts

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

4 mins ago

ಭಾರತದಲ್ಲಿ ಮೊಟೊರೊಲ ಎಡ್ಜ್ 50 ಫ್ಯೂಷನ್ ಬಿಡುಗಡೆ

ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್​ನೊಂದಿಗೆ ಬಂದಿದೆ.

5 mins ago

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ ಯತ್ನ, ಪ್ರತಿಭಟನೆ

ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…

16 mins ago

ಅಕ್ರಮ ಅಡುಗೆ ಎಣ್ಣೆ ಮಾರಾಟ: ಚಾಲಕ ಪೊಲೀಸರ ವಶಕ್ಕೆ

ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…

17 mins ago

ತ್ರಿವಳಿ ತಲಾಖ್‌ನಿಂದ ನೊಂದು ಹಿಂದೂ ಯುವಕನ್ನು ಮದುವೆಯಾದ ಮುಸ್ಲಿಂ ಮಹಿಳೆ

ತ್ರಿವಳಿ ತಲಾಖ್‌ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ…

36 mins ago

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್​​ ಫೈರ್; ಯುವಕ ಸಾವು

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…

46 mins ago