ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿದ್ದ ಹಾಗೂ ರಾಜಕೀಯವಾಗಿ ಜಿದ್ದಾಜಿದ್ದಿಯಾಗಿ ನಗರ ಸ್ಥಳೀಯ ಸಂಸ್ಥೆಗಳ 20 ಕ್ಷೇತ್ರಗಳಿಂದ ವಿಧಾನಪರಿಷತ್ತಿನ 25 ಸ್ಥಾನಗಳ ಚುನಾವಣೆಗೆ ಶುಕ್ರವಾರ ಮತದಾನ ನಡೆದಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಶೇ.99ಕ್ಕಿಂತ ಹೆಚ್ಚಿನ ಮತದಾನವಾಗಿದ್ದು, ಒಟ್ಟಾರೆ ಶೇ.99.78ರಷ್ಟು ಮತ ಪ್ರಮಾಣ ದಾಖಲಾಗಿದೆ.
ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯಾಗಿದ್ದ ಈ ಮೇಲ್ಮನೆ ಚುನಾವಣೆಗೆ ಸಂಸದರು, ಶಾಸಕರು, ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿ ಸದಸ್ಯರು ಮತ ಚಲಾಯಿಸಿದರು. ಮತದಾನ ಪ್ರಕ್ರಿಯೆ ಬಹುತೇಕ ಶಾಂತಿಯುತವಾಗಿ ಪೂರ್ಣಗೊಂಡಿದ್ದು, ಡಿ.14ರಂದು ಫಲಿತಾಂಶ ಹೊರಬೀಳಲಿದೆ.
ಎಲ್ಲಾ ಕ್ಷೇತ್ರಗಳಲ್ಲಿ ಮತದಾನ ಶಾಂತಿಪೂರ್ಣವಾಗಿ ನಡೆದಿದ್ದು, ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.
ಈ ಬಾರಿಯ ಚುನಾವಣೆಯಲ್ಲಿ ಅತಿ ಹೆಚ್ಚು ಮತದಾರರು ಇರುವ ಬೆಳಗಾವಿ ಕ್ಷೇತ್ರದಲ್ಲಿ ಅತಿ ಹೆಚ್ಚು ಶೇ.99.98 ಹಾಗೂ ಅತಿ ಕಡಿಮೆ ಮತದಾರರು ಹೊಂದಿರುವ ಕೊಡಗು ಕ್ಷೇತ್ರದಲ್ಲಿ ಅತಿ ಕಡಿಮೆ ಶೇ.99.70ರಷ್ಟು ಮತದಾನವಾಗಿದೆ. 2015ರ ವಿಧಾನಪರಿಷತ್ ಚುನಾವಣೆಯಲ್ಲಿ ಒಟ್ಟಾರೆ ಶೇ.99.60ರಷ್ಟು ಮತದಾನವಾಗಿತ್ತು.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…