News Karnataka Kannada
Wednesday, May 01 2024
ಬೆಂಗಳೂರು ನಗರ

ವಿಧಾನಪರಿಷತ್ ಚುನಾವಣೆ:ಇಂದಿನಿಂದ 3 ದಿನ ಸಿಎಂ ಬಸವರಾಜ ಬೊಮ್ಮಾಯಿ ಜಿಲ್ಲಾ ಪ್ರವಾಸ

Basavaraj Cm
Photo Credit :

ಬೆಂಗಳೂರು : ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ  ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಇಂದಿನಿಂದ 3 ದಿನ ಸಿಎಂ ಬಸವರಾಜ ಬೊಮ್ಮಾಯಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಅವರು ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ.

ಬಳಿಕ ಮಧ್ಯಾಹ್ನ2:30ಕ್ಕೆ ಹೆಚ್ ಎಎಲ್ ವಿಮಾನ ನಿಲ್ದಾಣದಿಂದ ಹೊರಟು 3:45ಕ್ಕೆ ಬೀದರ್‌ಗೆ ತಲುಪಲಿದ್ದಾರೆ. ಬೀದರ್‌ನಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಮತಯಾಚನೆ ನಡೆಸಿ ಇಂದು ರಾತ್ರಿ ಬೀದರ್‌ನಲ್ಲೇ ವಾಸ್ತವ್ಯ ಹೂಡಲಿದ್ದಾರೆ.ಬಳಿಕ ಡಿ. 6 ರಂದು ಬೀದರ್‌ನಿಂದ ಹುಬ್ಬಳ್ಳಿಗೆ ತೆರಳಲಿದ್ದಾರೆ.

ಹುಬ್ಬಳ್ಳಿಯಿಂದ ಗದಗಕ್ಕೆ ತೆರಳಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ. ಬಳಿಕ ಹಾವೇರಿ ಜಿಲ್ಲೆಯ ಕಾಗಿನೆಲೆಯಲ್ಲಿ ಸಿಎಂ ಬೊಮ್ಮಾಯಿ ಮತಯಾಚನೆ ನಡೆಸಿ ಪ್ರಚಾರದ ಬಳಿಕ ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು