ಬೆಂಗಳೂರು: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ವಿಧಾನಸೌಧದ ಮುಂಭಾಗದಲ್ಲಿ ಸೂಕ್ತ ಜಾಗಕ್ಕೆ ಸ್ಥಳಾಂತರ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಅವರು ಇಂದು ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನಾಚಾರಣೆಯ ಅಂಗವಾಗಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಸೂಕ್ತ ಸ್ಥಳದಲ್ಲಿ ಅವರ ಪ್ರತಿಮೆ ಇರುವುದು ಅವರಿಗೆ ನಾವು ಸಲ್ಲಿಸಬೇಕಾದ ಗೌರವ. ಈ ಬಗ್ಗೆ ಕೂಡಲೇ ತೀರ್ಮಾನವನ್ನು ಕೈಗೊಳ್ಳಲಾಗುವುದು. ನೇತಾಜಿ ಅವರ ಮುಂದಿನ ಜನ್ಮದಿನಾಚರಣೆಯನ್ನು ವಿಧಾನಸೌಧದ ಮುಂಭಾಗದಲ್ಲಿ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಸುಭಾಷ್ ಚಂದ್ರ ಬೋಸ್ ಅವರ ಬಗ್ಗೆ ಪ್ರೀತಿ, ವಿಶ್ವಾಸದಿಂದ ಕಟ್ಟಿರುವ ಹಲವಾರು ಸಂಘ ಸಂಸ್ಥೆಗಳ ಉದ್ದೇಶ ಹಾಗೂ ಬೇಡಿಕೆಗಳ ಬಗ್ಗೆ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದವರು ಹೇಳಿದರು.