ಬೆಂಗಳೂರು: ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ಸ್ಥಾಪನೆಗೆ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ(ಐಎಂಎ) ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಷ್ಟ್ರವ್ಯಾಪಿ ಹಾಗೂ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.
ಮುಷ್ಕರದಿಂದ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಹೊರರೋಗಿ ಚಿಕಿತ್ಸಾ ವಿಭಾಗ (ಒಪಿಡಿ) ಕಾರ್ಯನಿರ್ವಹಿಸುವುದಿಲ್ಲ. ಆದರೆ, ತುರ್ತು ಚಿಕಿತ್ಸಾ ಸೌಲಭ್ಯ, ಔಷಧಿ ಅಂಗಡಿಗಳು ಮತ್ತು ಒಳರೋಗಿ ವಿಭಾಗಗಳು ದಿನನಿತ್ಯದಂತೆ ಕಾರ್ಯ ನಿರ್ವಹಿಸಲಿವೆ.
ಬಂದ್ ಗೆ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ: ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಿಗ್ಗೆ 6ರಿಂದ ಬಂದ್ ಆಗಿದ್ದು, ಸಂಜೆ 6ರವರೆಗೂ ಬಂದ್ ಮುಂದುವರಿಯಲಿದೆ.
ಮುಷ್ಕರಕ್ಕೆ ಹುಬ್ಬಳ್ಳಿಯಲ್ಲಿ ಉತ್ತಮ ಸ್ಪಂದನೆ: ಕರಾಳ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗಳು ಬಂದ್ ಆಗಿದ್ದು, ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ನಗರದ ಕಿಮ್ಸ್ ಆಸ್ಪತ್ರೆ ಮತ್ತು ಚಿಟಗುಪ್ಪಿ ಆಸ್ಪತ್ರೆಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ
ತುಮಕೂರು ನಗರದಲ್ಲಿ ಉತ್ತಮ ಪ್ರತಿಕ್ರಿಯೆ: ರಾಷ್ಟ್ರೀಯ ವೈದ್ಯಕೀಯ ಆಯೋಗದ ಸ್ಥಾಪನೆ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿರುವ ಮುಷ್ಕರಕ್ಕೆ ತುಮಕೂರು ನಗರದಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.
ಇನ್ನೂ ರಾಜ್ಯದ ವಿವಿಧ ಕಡೆಗಳಲ್ಲಿ ಮುಷ್ಕರಕ್ಕೆ ಬೆಂಬಲ ವ್ಯಕ್ತವಾಗಿದೆ.