ಶಾಲೆಗಳಲ್ಲಿ ಸೋಂಕು ಕಂಡು ಬಂದಿಲ್ಲ, ಯಾವುದೇ ಶಾಲೆ ಮುಚ್ಚುವುದಿಲ್ಲ: ಬಿ.ಸಿ. ನಾಗೇಶ್

ರಾಜ್ಯದ ಯಾವುದೇ ಶಾಲೆಗಳಲ್ಲೂ 1 ರಿಂದ 10ನೇ ತರಗತಿಯಲ್ಲಿ ಕೊರೋನಾ ಸೋಂಕು ಕಂಡು ಬಂದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಪಿಯು ಕಾಲೇಜಿನಲ್ಲಿ ಮಾತ್ರ ಸೋಂಕು ಕಂಡು ಬಂದಿದೆ. ಶಿಕ್ಷಕರು ಸೇರಿ ಒಟ್ಟು ಈವರೆಗೂ 172 ಮಕ್ಕಳಿಗೆ ಪಾಸಿಟಿವ್ ಬಂದಿದೆ.

ಇದರಲ್ಲಿ ನೂರು ಮಕ್ಕಳು ಈಗಾಗಲೇ ಗುಣಮುಖರಾಗಿದ್ದಾರೆ. ಕೋವಿಡ್ ಬಂದ ಮಕ್ಕಳು ಆರೋಗ್ಯವಾಗಿದ್ದಾರೆ. ಮತ್ತೆ ಕಾಲೇಜು ಆರಂಭವಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕಡಿಮೆ ಸೋಂಕು ಇರುವುದರಿಂದ ಯಾವುದೇ ಶಾಲೆ ಮುಚ್ಚುವುದಿಲ್ಲ. ದ್ವಿತೀಯ ಪಿಯು ಮಕ್ಕಳಿಗೆ ಇಂದು ಅರ್ಧ ವಾರ್ಷಿಕ ಪರೀಕ್ಷೆ ನಡೆಯುತ್ತಿದೆ. ಕಳೆದ ಎರಡು ವರ್ಷ ಪರೀಕ್ಷೆ ಆಗಿಲ್ಲ. ಹಾಗಾಗಿ ಪಿಯು ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದೆ ಎಂದು ಹೇಳಿದರು.

ಈ ಹಿಂದೆ ಇದ್ದ ಎಸ್​​ಓಪಿಯೇ ಮುಂದುವರೆಯುತ್ತದೆ. ರೆಸಿಡೆನ್ಸಿ ಶಾಲೆಗಳಿಗೆ ಹೆಚ್ಚು ಮಹತ್ವ ನೀಡಲಾಗುತ್ತಿದೆ. ಅದನ್ನು ಮಾನಿಟರಿಂಗ್ ಮಾಡಲಾಗ್ತಿದೆ. ಬಿಇಓ ಮತ್ತು ಟಿಹೆಚ್ಓ ಸಮಿತಿ ನೇತೃತ್ವದಲ್ಲಿ ತಪಾಸಣೆ ಮಾಡಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಇನ್ನು ಹಾಸ್ಟೆಲ್‌ಗಳಲ್ಲಿ ಒಟ್ಟಿಗೆ ಊಟಕ್ಕೆ ಹೋಗಬಾರದು. ದೂರ ದೂರದಲ್ಲಿ ಕುಳಿತು ಊಟ ಮಾಡಬೇಕು.ಆದರೆ ಈ ಬಗ್ಗೆ ಯಾವುದೇ ಮಾರ್ಗಸೂಚಿ ಮಾಡಿಲ್ಲ ಎಂದು ಸಚಿವರು ಹೇಳಿದರು.

ಪೋಷಕರು ಎರಡು ಡೋಸ್ ವ್ಯಾಕ್ಸಿನ್ ಪಡೆಯುವುದು ಕಡ್ಡಾಯ ಮಾಡಿಲ್ಲ. ಕಡ್ಡಾಯವಾಗಿ ತೆಗೆದುಕೊಳ್ಳಬೇಕು ಎಂದು ಕಾನೂನಿನಲ್ಲಿ ಇಲ್ಲ. ಹಾಗಾಗಿ ಪೋಷಕರು ಎರಡು ಡೋಸ್ ಪಡೆದಿಲ್ಲವೆಂದು ಮಕ್ಕಳಿಗೆ ಯಾವುದೇ ನಿರ್ಬಂಧ ಮಾಡಿಲ್ಲ. ಎಲ್ಲಾ ಪೋಷಕರು ಎರಡು ಡೋಸ್ ಪಡೆಯಿರಿ ಎಂದು ಮನವಿ ಮಾಡಿಕೊಳ್ಳಲಾಗುವುದು ಅಷ್ಟೇ ಎಂದರು.

Sneha Gowda

Recent Posts

ಅಂಜಲಿ ಹತ್ಯೆ ಪ್ರಕರಣ : ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…

10 mins ago

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಬಿಜೆಪಿ ಮಾಜಿ ಸರಪಂಚ್ ಸಾವು

ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…

21 mins ago

ವಿಮಾನ ಇಂಜಿನ್‌ನಲ್ಲಿ ಬೆಂಕಿ : ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್‌ ಇಂಡಿಯಾ ಎಕ್ಸಪ್ರೆಸ್‌ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದೆ.…

29 mins ago

ಸಿಂಗಾಪುರದಲ್ಲಿ ಹೆಚ್ಚುತ್ತಿರುವ ಕೊರೊನಾ ಅಲೆ ಭೀತಿ : ಮಾಸ್ಕ್‌ ಧರಿಸುವಂತೆ ಆದೇಶ

ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್‌…

31 mins ago

ಸುರತ್ಕಲ್: ಶಬರಿಮಲೆ ಹದಿನೆಂಟು ಮೆಟ್ಟಿಲು ಹತ್ತುವ ವೇಳೆ ಹೃದಯಾಘಾತ !

ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್‌ ಶೆಟ್ಟಿ (37) ಅವರು ಹೃದಯಾಘಾತದಿಂದ…

43 mins ago

ಸಿಎಂ ಸಿದ್ದು ತವರು ಕ್ಷೇತ್ರದಲ್ಲಿ ವಾಂತಿ-ಬೇದಿಯಿಂದ ತತ್ತರಿಸಿದ ಗ್ರಾಮಸ್ಥರು ..!

ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…

52 mins ago