ಶಿಕ್ಷಣ ಇಲಾಖೆ ಹೊಸ ಕಾಯಕಲ್ಪದೊಂದಿಗೆ ಕೆಲಸ‌ ಮಾಡಬೇಕಿದೆ: ಸುರೇಶ್ ಕುಮಾರ್‌

ಬೆಂಗಳೂರು: ಹಿಜಾಬ್-ಸಮವಸ್ತ್ರಗಳ ಸಂಘರ್ಷದಲ್ಲಿ ವಿದ್ಯಾರ್ಥಿಗಳ ಭವಿಷ್ಯ ಕಾಯುವ ಕೆಲಸಕ್ಕೆ ಶಿಕ್ಷಣ ಇಲಾಖೆ ಹೊಸ ಕಾಯಕಲ್ಪದೊಂದಿಗೆ ಕೆಲಸ‌ ಮಾಡಬೇಕಿದೆ, ಹಿಜಾಬ್ ಅಥವಾ ಸಮವಸ್ತ್ರ, ಅದರ ಸುತ್ತಲೂ ಭುಗಿಲೇಳುತ್ತಿರುವ ವಿವಾದ ಮೇಲ್ನೋಟದ್ದಲ್ಲ. ಎಂದು ಮಾಜಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ನಾಗೇಶ್ ಅವರುಗಳಿಗೆ ಪತ್ರ ಬರೆದಿರುವ ಅವರು ಶಾಲೆ ಕಾಲೇಜುಗಳ ಆವರಣದಲ್ಲಿ ಸೌಹಾರ್ದತೆಯನ್ನು ಕಾಪಾಡುವ ನಿಟ್ಟಿನಲ್ಲಿ‌ ಆರೋಪ ಪ್ರತ್ಯಾರೋಪಗಳನ್ನು ಮೀರುವ, ಶಿಕ್ಷಣದ‌ ಕಡೆಗೆ ಒಲವು ಹೆಚ್ಚುವ ಸಕಾರಾತ್ಮಕವಾದ ಕಾರ್ಯಕ್ರಮಗಳನ್ನು ರೂಪಿಸುವ ಕುರಿತಂತೆ ನಾವು ಹೆಚ್ಚಾಗಿ ಆಲೋಚಿಸಬೇಕಿದೆ ಎಂದು ಹೇಳಿದ್ದಾರೆ.

ಆಂತರಿಕ ಸಂಘರ್ಷ, ಅದನ್ನು ಹುಟ್ಟುಹಾಕುತ್ತಿರುವವರ ಮನೋಧರ್ಮ, ಮೂಲಭೂತ ಅವಶ್ಯಕತೆಗಳನ್ನು ಮೀರಿರುವುದು ಗಮನೀಯವೆಂದು ನೆನಪಿಸಿದ್ದಾರೆ.ಘನ ನ್ಯಾಯಾಲಯವು ಸಾಂವಿಧಾನಿಕ‌ ಅವಕಾಶಗಳನ್ನು ಅವಲೋಕಿಸುತ್ತಿರುವಾಗಲೂ ಶಾಂತಿ‌ ಕದಡುವ ಪ್ರಯತ್ನಗಳಾಗುತ್ತಿರುವುದು ಇದರ‌ ಹಿಂದಿನ‌ ಉದ್ದೇಶವನ್ನು ಸ್ಪಷ್ಟ ಪಡಿಸುತ್ತದೆ ಎಂದಿರುವ ಸುರೇಶ್ ಕುಮಾರ್, ಶಿಕ್ಷಣ‌ ಇಲಾಖೆ ಕೂಡಲೇ‌ ಕೆಲವು ಕ್ರಮಗಳಿಗೆ ಮುಂದಾಗಬೇಕೆಂದು ಸಲಹೆ ನೀಡಿದ್ದಾರೆ.

Swathi MG

Recent Posts

ನಗರ ಸಾರಿಗೆ ಬಸ್‌ ಮಾರ್ಗ ಬದಲಾಯಿಸಲು ಆಗ್ರಹ

ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್‌ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು…

8 mins ago

ನಟಿ ಮಾಳವಿಕಾ ಅವಿನಾಶ್ ತಂದೆ ನಟೇಶನ್ ಗಣೇಶನ್ ನಿಧನ

ರಾಜ್ಯ ಬಿಜೆಪಿ ಉಪಾಧ್ಯಕ್ಷ, ನಟಿ, ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.

16 mins ago

ಪತ್ನಿಯ ಗುಪ್ತಾಂಗವನ್ನು ಮೊಳೆಗಳಿಂದ ವಿರೂಪಗೊಳಿಸಿ,ಬೀಗ ಹಾಕಿದ ಕ್ರೂರ ಪತಿ

ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…

33 mins ago

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

39 mins ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

58 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

1 hour ago