ಬೆಂಗಳೂರು ನಗರ

ಶಿಕ್ಷಣ ಸಂಸ್ಥೆಗಳೊಂದಿಗೆ ಉದ್ಯಮಗಳ ಸಂಬಂಧ ಅಗತ್ಯ: ಸಚಿವ ಅಶ್ವತ್ಥ ನಾರಾಯಣ

ಬೆಂಗಳೂರು: ರಾಜ್ಯದಲ್ಲಿ ಜಾರಿಗೆ ಬರುತ್ತಿರುವ ನೂತನ ಶಿಕ್ಷಣ ನೀತಿಯು ಕ್ರಾಂತಿಕಾರಕ ಬದಲಾವಣೆಗಳನ್ನು ತರಲಿದೆ. ಆದ್ದರಿಂದ ಉದ್ದಿಮೆಗಳು ಶಿಕ್ಷಣ ಸಂಸ್ಥೆಗಳ ಜೊತೆ ತಮ್ಮ ಅಗತ್ಯಗಳಿಗೆ ತಕ್ಕಂತೆ ರಚನಾತ್ಮಕ ಸಂಬಂಧ ಹೊಂದಬೇಕು ಎಂದು ಉನ್ನತ ಶಿಕ್ಷಣ ಮತ್ತು ಐಟಿ-ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಸೋಮವಾರ ಬೆಂಗಳೂರು ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟವು ಆರಂಭಿಸಿರುವ ಉದ್ಯಮ ಪರಿಪೋಷಣಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರು ನಗರವು ನವೋದ್ಯಮಗಳಿಗೆ ಜಾಗತಿಕ ಮಟ್ಟದಲ್ಲಿ ಹೆಸರುವಾಸಿ ಆಗಿದೆ. ಉದ್ದಿಮೆಗಳ ಬೆಳವಣಿಗೆಗೆ ಅಗತ್ಯವಿರುವ ಸಕಲ ಬಗೆಯ ನೆರವನ್ನೂ ನೀಡಲು ಸರಕಾರ ಮುಕ್ತ ಮನಸ್ಸು ಹೊಂದಿದೆ. ಈ ಸಂಬಂಧ ಈಗಾಗಲೇ ಹತ್ತಾರು ಉಪಯುಕ್ತ ನೀತಿಗಳನ್ನು ರೂಪಿಸಿದೆ ಎಂದರು.

ಒಕ್ಕೂಟವು ಸರಕಾರಕ್ಕಿಂತಲೂ ಕಡಿಮೆ ಶುಲ್ಕವನ್ನು ನಿಗದಿ ಪಡಿಸಿ ಉದ್ಯಮ ಪರಿಪೋಷಣೆಗೆ ಮುಂದಾಗಿರುವುದು ಸ್ವಾಗತಾರ್ಹವಾಗಿದೆ. ಎನ್ಇಪಿ ಜಾರಿಯಲ್ಲಿ ಉದ್ಯೋಗ ಸೃಷ್ಟಿ ಮತ್ತು ಉದ್ದಿಮೆಗಳ ಜೊತೆಗಿನ ಬಾಂಧವ್ಯಕ್ಕೆ ಮಹತ್ವ ಕೊಡಲಾಗಿದೆ ಎಂದು ಅವರು ಹೇಳಿದರು.

ಸರಕಾರವು ಎಂಜಿನಿಯರಿಂಗ್ ಸೇರಿದಂತೆ ಸಮಗ್ರ ಶಿಕ್ಷಣ ವ್ಯವಸ್ಥೆಯ ಸುಧಾರಣೆಯನ್ನು ತ್ವರಿತ ಗತಿಯಲ್ಲಿ ಮಾಡುತ್ತಿದೆ. ಇದರ ಜೊತೆಗೆ ಸಂಶೋಧನೆ ಮತ್ತು ನಾವೀನ್ಯತೆ ನೀತಿಯನ್ನು ರೂಪಿಸಲಾಗಿದೆ. ಬೆಂಗಳೂರು ನಗರವು ಉದ್ಯೋಗ ಸಂಸ್ಕೃತಿಯಲ್ಲಿ ಪ್ಯಾರಿಸ್ ಸೇರಿದಂತೆ ವಿಶ್ವದ ಅತ್ಯುತ್ತಮ ನಗರಗಳನ್ನು ಕೂಡ ಮೀರಿಸಬೇಕು. ಕರ್ನಾಟಕವು ಉಜ್ವಲ ಅವಕಾಶಗಳ ತಾಣವಾಗಿದ್ದು, ಬಂಡವಾಳ ಹೂಡಿಕೆಗೆ ಪ್ರಶಸ್ತವಾಗಿದೆ ಎಂದು ಸಚಿವರು ಹೇಳಿದರು.

ಸಮಾರಂಭದಲ್ಲಿ ಬೆಂಗಳೂರು ಕೈಗಾರಿಕಾ ಮತ್ತು ವಾಣಿಜ್ಯ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Sneha Gowda

Recent Posts

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

5 mins ago

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

9 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

10 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

10 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

10 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

11 hours ago