News Karnataka Kannada
Thursday, May 02 2024
ಬೆಂಗಳೂರು ನಗರ

ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮನೆಗೆ ನುಗ್ಗಿ ದಾಂಧಲೆ ನಡೆಸಿರುವುದು ಖಂಡನೀಯ: ಸಿಎಂ

Cm Bommai
Photo Credit :

ಬೆಂಗಳೂರು: ಪ್ರಾಥಮಿಕ ಹಾಗು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ನಿವಾಸಕ್ಕೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ತಿಪಟೂರಿನ ಮನೆಯ ಆವರಣಕ್ಕೆ ನುಗ್ಗಿ NSUI ಕಾರ್ಯಕರ್ತರು ಪ್ರತಿಭಟನೆ ಮಾಡಿ ದಾಂಧಲೆ ನಡೆಸಿರುವುದು ಖಂಡನೀಯ. ಇಂತಹ ನಡೆ ವಿದ್ಯಾರ್ಥಿಗಳಿಗೆ, ಶಿಕ್ಷಣ ಪ್ರೇಮಿಗಳಿಗೆ ಶೋಭೆ ತರುವುದಿಲ್ಲ. ಈ ಕುಕೃತ್ಯ ನಡೆಸಿರುವ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಪ್ರಾಥಮಿಕ ಹಾಗು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ನಿವಾಸಕ್ಕೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರಿನಲ್ಲಿರುವ ಅವರ ನಿವಾಸದಲ್ಲಿ ನಡೆದಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ತಿಪಟೂರಿನ ಮನೆಯ ಆವರಣಕ್ಕೆ ನುಗ್ಗಿ NSUI ಕಾರ್ಯಕರ್ತರು ಪ್ರತಿಭಟನೆ ಮಾಡಿ ದಾಂಧಲೆ ನಡೆಸಿದ್ದು ಈ ಸಂಬಂಧ 15 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು