ಬೆಂಗಳೂರಿನ ಸದಾಶಿವನಗರ ಬಳಿ ಬಾಷ್ಯಂ ಸರ್ಕಲ್ ಹತ್ತಿರದ ಸ್ಯಾಂಕಿ ಕೆರೆಯಲ್ಲಿ ಛತ್ರಪತಿ ಶಿವಾಜಿ ಅವರ ಪ್ರತಿಮೆಗೆ ಕಪ್ಪು ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಶುಕ್ರವಾರ ಮರಾಠ ಅಸೋಸಿಯೇಷನ್ ನೀಡಿದ್ದ ದೂರಿನ ಆಧಾರದ ಮೇಲೆ ಸದಾಶಿವನಗರ ಪೊಲೀಸರು ತನಿಖೆ ಆರಂಭಿಸಿ, ಪ್ರಮುಖ ಆರೋಪಿ ಸೇರಿದಂತೆ ಆರು ಮಂದಿಯನ್ನು ಬಂಧಿಸಿದ್ದಾರೆ.
ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ಬೇಡಿಕೆಯಿಂದ ಆಕ್ರೋಶಿತರಾದ ದುಷ್ಕರ್ಮಿಗಳುಅಸಮಾಧಾನಗೊಂದು ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.