ಬೆಂಗಳೂರು : ಕಾರ್ಮಿಕರಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕಾರ್ಮಿಕರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ರೂಪಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳಿಗೆ ಅಗತ್ಯ ನಿಯಮಗಳನ್ನು ಸಿದ್ದಪಡಿಸಿ ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವರು. ಪ್ರಸ್ತುತ ಕಾರ್ಮಿಕರಿಗೆ ಸಂಬಂಧಿಸಿದಂತೆ 29 ಕಾಯ್ದೆಗಳು ಜಾರಿಯಲ್ಲಿವೆ. ಇವುಗಳ ಬದಲಿಗೆ ವೇತನ ಸಂಹಿತೆ, ಕೈಗಾರಿಕಾ ಸಂಹಿತೆ, ಸಾಮಾಜಿಕ ಭದ್ರತಾ ಸಂಹಿತೆ ಮತ್ತು ವೃತ್ತಿ ಸುರಕ್ಷತೆ, ಆರೋಗ್ಯ ಹಾಗೂ ಸೇವಾ ಷರತ್ತುಗಳ ಸಂಹಿತೆ ಎಂಬ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಲಾಗಿದೆ. ಈ ಕಾಯ್ದೆಗಳನ್ನು ಕರ್ನಾಟಕದಲ್ಲೂ ಜಾರಿಗೆ ತರಲು ನಿಯಮ ರೂಪಿಸುವ ಕಾರ್ಯ ನಡೆದಿದೆ ಎಂದು ಹೇಳಿದ್ದಾರೆ.
ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…
ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…
ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.
ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…
ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್ಗಳಿಂದ…