ಶೇ.100ರಷ್ಟು ಗುರಿ ಸಾಧಿಸಲಿದೆ ಬೆಂಗಳೂರು ಲಸಿಕೆ 2ನೇ ಡೋಸ್ ವಿತರಣೆ

ಬೆಂಗಳೂರು: ಬೆಂಗಳೂರಿನಲ್ಲಿ ಶೀಘ್ರವೇ ಕೊರೊನಾ ಲಸಿಕೆಯ ಎರಡನೇ ಡೋಸ್ ವಿತರಣೆ ಶೇ.100ರ ಗಡಿ ತಲುಪಲಿದ್ದು, ಪೂರ್ಣಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಜೆ ಮಂಜುನಾಥ್ ತಿಳಿಸಿದ್ದಾರೆ.

ಜಿಲ್ಲೆಯು ಮುಂದಿನ ಒಂದೆರಡು ದಿನಗಳಲ್ಲಿ ಶೇ.100ರಷ್ಟು ಲಸಿಕೆ ಪೂರೈಸಲಿದೆ. ಭಾರತದಲ್ಲಿ ಇದುವರೆಗೆ 200 ಓಮಿಕ್ರಾನ್ ಪ್ರಕರಣಗಳು ಕಂಡುಬಂದಿವೆ. ಕೋವಿಡ್-19 ಲಸಿಕೆಯಲ್ಲಿ ಮೊದಲ ಡೋಸ್ ವಿತರಣೆಯಲ್ಲಿ ರಾಜ್ಯದ ಮೂರು ಜಿಲ್ಲೆಗಳು ಶೇಕಡಾ 100 ಗುರಿ ಸಾಧನೆ ಮಾಡಿದ್ದು,ಯಾರೂ ಭಯಪಡುವ ಅಗತ್ಯವಿಲ್ಲ, ಓಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿವೆ, ಆದರೆ, ಡೆಲ್ಟಾದಷ್ಟು ವೇಗವಾಗಿ ಹರಡುವುದಿಲ್ಲ, ಪ್ರತಿನಿತ್ಯ ಸಾಕಷ್ಟು ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಈ ಹಿನ್ನೆಲೆಯಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅಭಿನಂದನೆ ತಿಳಿಸಿದ್ದರು.ನಗರದಲ್ಲಿ ಲಸಿಕೆ ವಿತರಣೆ ತೀವ್ರಗತಿಯಲ್ಲಿ ಸಾಗುತ್ತಿದ್ದು, ತನ್ನ ವ್ಯಾಪ್ತಿಯ ಒಟ್ಟಾರೆ ಶೇ.91ರಷ್ಟು ಜನರಿಗೆ ಬಿಬಿಎಂಪಿ ಲಸಿಕೆಯನ್ನು ನೀಡಿದೆ. ಲಸಿಕೆ ವಿತರಣೆಯನ್ನು ತೀವ್ರವಾಗಿ ನಡೆಸಲು ವಿವಿಧ ಎನ್‌ಜಿಒಗಳು ಕೂಡ ನೆರವು ನೀಡುತ್ತಿವೆ.

ಬೆಂಗಳೂರು ನಗರ ಸೇರಿದಂತೆ ಮೂರು ಜಿಲ್ಲೆಗಳು ಶೇ 100 ರಷ್ಟು ಗುರಿ ಸಾಧಿಸಿದ್ದು, ರಾಜ್ಯದ ಸರಾಸರಿ ಶೇ 96 ರಷ್ಟು ಇದೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ಒಟ್ಟಾರೆ ಮೊದಲ ಡೋಸ್ ವಿತರಣೆ ಶೇಕಡಾ 96 ರಷ್ಟಿದ್ದು, 18 ವರ್ಷಕ್ಕಿಂತ ಮೇಲ್ಪಟ್ಟ 4.9 ಕೋಟಿ ಜನರಲ್ಲಿ ಸುಮಾರು 4.7 ಕೋಟಿ ಜನರು ಲಸಿಕೆ ಹಾಕಿಸಿಕೊಂಡಿದ್ದಾರೆ.

ಬೆಂಗಳೂರು ನಗರದಲ್ಲಿಯೇ ( ಶೇ.127) ಅತೀ ಹೆಚ್ಚು ಜನರು ಮೊದಲ ಡೋಸ್ ಲಸಿಕೆ ಪಡೆದುಕೊಂಡಿದ್ದು, ನಂತರದ ಸ್ಥಾನ ಗದಗ (ಶೇ 102) ಹಾಗೂ ವಿಜಯಪುರ (ಶೇ 101) ಪಡೆದುಕೊಂಡಿದೆ. ಈ ನಡುವೆ, ಇತರ ಐದು ಜಿಲ್ಲೆಗಳು ಶೇ.100 ಮೊದಲ ಡೋಸ್ ವ್ಯಾಪ್ತಿಯನ್ನು ಪೂರ್ಣಗೊಳಿಸುವ ಅಂಚಿನಲ್ಲಿವೆ.

ಕೊಡಗು ಮತ್ತು ಬಾಗಲಕೋಟೆ ಜಿಲ್ಲೆಗಳು ಶೇ.99, ಬೆಳಗಾವಿ, ಚಿಕ್ಕಬಳ್ಳಾಪುರ ಮತ್ತು ದಾವಣಗೆರೆ ಶೇ.98 ಗುರಿ ಸಾಧಿಸಿವೆ. ಲಸಿಕೆ ವಿತರಣೆ ಹೊಸ ಮೈಲಿಗಲ್ಲಿನಲ್ಲಿ ರಾಜ್ಯವು ಅರ್ಹ ಜನಸಂಖ್ಯೆಯ ಶೇ.96ರಷ್ಟು ಜನರಿಗೆ ಮೊದಲ ಡೋಸ್‌ ಲಸಿಕೆ ನೀಡಿದ್ದು, ಶೇ.80ರಷ್ಟು ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ವರ್ಷಾಂತ್ಯದ ವೇಳೆಗೆ ಎಲ್ಲಾ ಅರ್ಹ ಜನರಿಗೆ ಲಸಿಕೆ ನೀಡಲಾಗುತ್ತದೆ ಎಂದು ಡಾ.ಸುಧಾಕರ್ ಅವರು ಹೇಳಿದ್ದಾರೆ.

ಈ ನಡುವೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು, ನಗರದಲ್ಲಿ ಪೂರ್ಣ ಪ್ರಮಾಣದ ಜನರಿಗೆ ಲಸಿಕೆ ನೀಡಲು ವಿವಿಧ ಎನ್‌ಜಿಒಗಳ ಸಹಯೋಗದಲ್ಲಿ ಆರು ಲಸಿಕೆ ವ್ಯಾನ್‌ಗಳಿಗೆ ಚಾಲನೆ ನೀಡಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲಿ ಶೇ.60 ರಷ್ಟು ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

2021 ರ ಅಂತ್ಯದ ವೇಳೆಗೆ ಶೇ.70ರಷ್ಟು ಜನರಿಗೆ ಎರಡೂ ಡೋಸ್ ಲಸಿಕೆ ನೀಡುವ ಭರವಸೆಯನ್ನು ಆರೋಗ್ಯ ಇಲಾಖೆ ಹೊಂದಿದೆ ಎಂದು ವರದಿಗಳು ತಿಳಿಸಿವೆ.

Swathi MG

Recent Posts

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

10 mins ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

21 mins ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

32 mins ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

1 hour ago

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

1 hour ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

2 hours ago