ಶ್ರೀಶೈಲದಲ್ಲಿ ಕನ್ನಡಿಗ ಸಾವು : ಶಾಂತಿ ಕಾಪಾಡುವಂತೆ ಸಿಎಂ ಬೊಮ್ಮಾಯಿ ಮನವಿ

ಬೆಂಗಳೂರು: ರಾಜ್ಯದಲ್ಲಿ ಪ್ರತಿಯೊಬ್ಬರೂ ಶಾಂತಿ, ಸುವ್ಯವಸ್ಥೆ ಕಾಪಾಡಿ ಸಂಯಮದಿಂದ ವರ್ತಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನವಿ ಮಾಡಿದ್ದಾರೆ.

ವಿಧಾಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಶಾಂತಿ ಸೌಹಾರ್ದತೆ, ಸಹೊದರತ್ವಕ್ಕೆ ಹೆಸರುವಾಸಿಯಾದ ರಾಜ್ಯ. ಕಾನೂನು ಸುವ್ಯವಸ್ಥೆಗೆ ಯಾರೊಬ್ಬರೂ ಧಕ್ಕೆ ಉಂಟು ಮಾಡಬಾರದು ಎಂದು ಸಲಹೆ ನೀಡಿದರು.

ಪ್ರತಿಯೊಬ್ಬರೂ ಕಾನೂನಿಗೆ ಗೌರವ ಕೊಟ್ಟು ಶಾಂತಿಯಿಂದ ವರ್ತಿಸಬೇಕು. ಯಾರೊಬ್ಬರೂ ಗೊಂದಲಗಳನ್ನು ಸೃಷ್ಟಿಸಬಾರದು ಎಂದು ಹೇಳಿದರು.

ಕರ್ನಾಟಕ ಮೊದಲಿನಿಂದಲೂ ಶಾಂತಿ ಪ್ರಿಯ ನಾಡು. ಅನೇಕ ವಿಷಯಗಳಲ್ಲಿ ನಾವು ಇತರರಿಗೆ ಮಾದರಿಯಾಗಿದ್ದೇವೆ. ಅದನ್ನು ಕಾಪಾಡಿ ಉಳಿಸಿಕೊಂಡು ಹೋಗುವುದು ಪ್ರತಿಯೊಬ್ಬರ ಜವಾಬ್ದಾರಿ.

ರಾಜ್ಯದಲ್ಲಿ ಪ್ರಸ್ತುತ ಹಲವಾರು ಸಮಸ್ಯೆಗಳಿವೆ. ಹಿಜಾಬ್‍ನಿಂದ ಉಂಟಾಗಿದ್ದ ಸಂಘರ್ಷ ಕೊನೆಗೆ ಹೈಕೋರ್ಟ್ ತೀರ್ಪಿನಿಂದ ಇತ್ಯರ್ಥವಾಗಿದೆ. ಏನೇ ಸಮಸ್ಯೆ ಬಂದರೂ ಕಾನೂನಿನಡಿಯೇ ಬಗೆಹರಿಸಲು ಸರ್ಕಾರ ಸಿದ್ಧವಿದೆ. ಜನತೆಯು ಗೊಂದಲಕ್ಕೆ ಉಂಟಾಗಬಾರದು ಎಂದರು.

ಆಂಧ್ರ ಸಿಎಂ ಜತೆ ಮಾತುಕತೆ:

ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್‍ಮೋಹನ್‍ರೆಡ್ಡಿ ಅವರ ಜತೆ ದೂರವಾಣಿ ಮೂಲಕ ಮಾತುಕತೆ ನಡೆಸುತ್ತೇನೆ. ಮುಂದೆ ಇಂತಹ ಘಟನೆಗಳು ಮರುಕಳುಹಿಸದಂತೆ ಎಲ್ಲರೂ ಎಚ್ಚರವಹಿಸಬೇಕಾದ ಅಗತ್ಯವಿದೆ ಎಂದು ಹೇಳಿದರು.

ಶ್ರೀಶೈಲಕ್ಕೆ ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ದೇಶದ ವಿವಿಧ ವಿವಿಧ ಭಾಗಗಳಿಂದ ದೊಡ್ಡ ಮಟ್ಟದಲ್ಲಿ ಭಕ್ತರು ಸೇರುತ್ತಾರೆ. ಭಕ್ತರು ಬಂದಾಗ ಇಂತಹ ಘಟನೆಗಳು ನಡೆಯಬಾರದು. ಏನೇ ಸಣ್ಣಪುಟ್ಟ ಗೊಂದಲಗಳಿದ್ದರೂ ನಾವೆಲ್ಲರೂ ಅನುಸರಿಸಿಕೊಂಡು ಹೋಗಬೇಕು ಎಂದು ಕಿವಿಮಾತು ಹೇಳಿದರು.

ಹೊರ ರಾಜ್ಯಗಳಿಂದ ಬರುವ ಭಕ್ತರಿಗೆ ಸೂಕ್ತ ರಕ್ಷಣೆ ಕೊಡುವಂತೆ ಆಂಧ್ರ ಪ್ರದೇಶದ ಸಿಎಂ ಹಾಗೂ ಅಧಿಕಾರಿಗಳ ಜತೆ ನಾನು ಮಾತನಾಡುತ್ತೇನೆ. ಯಾವಾ ಕಾರಣಕ್ಕಾಗಿ ಘಟನೆ ನಡೆದಿದೆ ಎಂಬ ಸಂಪೂರ್ಣವಾದ ಮಾಹಿತಿ ಇಲ್ಲ. ಆದರೂ ಇಂತಹ ಘಟನೆ ನಡೆದಿರುವುದು ನೋವಿನ ಸಂಗತಿ ಎಂದು ಸಿಎಂ ವಿಷಾದಿಸಿದರು.

Swathi MG

Recent Posts

ಆಫೀಸ್‌ನಲ್ಲಿ ಒತ್ತಡಕ್ಕೆ ಒಳಗಾಗ್ತಿದ್ದೀರಾ : ಹಾಗಾದ್ರೆ ಇಲ್ಲಿದೆ ಟಿಪ್ಸ್‌

ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…

15 mins ago

ಇಂದು 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…

38 mins ago

ಇಂದು ತಾಯಂದಿರ ದಿನ : ಈ ದಿನದ ಮಹತ್ವ ,ಹಿನ್ನೆಲೆ ಏನು?

ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…

56 mins ago

ಇಂದಿನ ರಾಶಿ ಫಲ : ಯಾರಿಗೆ ಶುಭ, ಯಾರಿಗೆ ಅಶುಭ

ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…

1 hour ago

ಇಂದು ಶಂಕರ ಜಯಂತಿ : ಶಂಕರಾಚಾರ್ಯರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…

1 hour ago

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

9 hours ago