ಶ್ರೀಸಿದ್ದಗಂಗಾ ಮಠಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿ ಲಕ್ಷ ಪುಷ್ಪ ಬಿಲ್ವಾರ್ಚನೆ ಪೂಜೆಯಲ್ಲಿ ಭಾಗಿಯಾಗಿದ್ದರು.
ಈ ವೇಳೆ ಮಾತನಾಡಿದ ಅವರು, ಶಿವಕುಮಾರಶ್ರೀಗಳ ಗದ್ದುಗೆಗೆ ಎರಡನೇ ವರ್ಷದ ಲಕ್ಷ ಪುಷ್ಪ ಬಿಲ್ವಾರ್ಚನೆ ಕಾರ್ಯಕ್ರಮಕ್ಕೆ ಬಂದಿದ್ದೇನೆ. ಶ್ರೀಗಳ ಆಶಿರ್ವಾದ ಪಡೆದಿದ್ದೇನೆ. ಅವರು ಮಾಡಿರುವ ಸೇವೆ ಅನನ್ಯವಾಗಿದೆ. ಅವರು ಇರುವ ಕಾಲದಲ್ಲಿ ನಾವಿರುವುದು ನಮ್ಮ ಪುಣ್ಯ ಎಂದರು.
ಶಿವಕುಮಾರ ಸ್ವಾಮೀಜಿಗಳು ಲಿಂಗೈಕ್ಯರಾದ ದಿನವನ್ನು ದಾಸೋಹ ದಿನವನ್ನಾಗಿ ಆಚರಿಸಲು ತೀರ್ಮಾನಿಸಲಾಗಿದ್ದು, ಈ ಬಗ್ಗೆ ಮಠಾಧೀಶರ ಜತೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.
ಕೋವಿಡ್ ಮೂರನೇ ಅಲೆ ಭೀತಿ: ರಾಜ್ಯಕ್ಕೆ ಕೊರೋನಾ ಮೂರನೇ ಅಲೆ ಭೀತಿ ಹಿನ್ನೆಲೆ, ನಿಗಾ ವಹಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಕಂಟೇನ್ಮೆಂಟ್ ವಲಯಗಳನ್ನು ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಶಾಲೆ, ಕಾಲೇಜುಗಳಲ್ಲೂ ಸಹ ಹೆಚ್ಚಿನ ಬಿಗಿ ಕ್ರಮ ಕೈಗೊಳ್ಳಲು ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸೂಚಿಸಲಾಗಿದೆ ಎಂದರು.