ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ಸರ್ಕಾರ 180 ಕೋಟಿ ರೂ.ಗಳ ವೆಚ್ಚದಲ್ಲಿ ಬೃಹತ್ ಮಿಲಿಟರಿ ಶಾಲೆಯನ್ನು ಪ್ರಾರಂಭಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 191 ನೇ ಸ್ಮರಣೋತ್ಸವ ಅಂಗವಾಗಿ ರಾಯಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡಿದ ಅವರು, ಈ ಉದ್ದೇಶಕ್ಕಾಗಿ 55 ಕೋಟಿ ರೂ.ಗಳನ್ನು ಸರ್ಕಾರ ಈಗಾಗಲೇ ಬಿಡುಗಡೆ ಮಾಡಿದೆ. ಈ ವರ್ಷ ಶಾಲೆಯ ಕಾಮಗಾರಿ ಪೂರ್ಣಗೊಳ್ಳಲಿದೆ.
ರಕ್ಷಣಾ ಇಲಾಖೆ ಶಾಲೆಯ ಉಸ್ತುವಾರಿಯನ್ನು ವಹಿಸಿಕೊಳ್ಳಲು ಮಾತುಕತೆ ನಡೆದಿದೆ. ಪರಿಶೀಲನಾ ಕಾರ್ಯವೂ ನಡೆದಿದ್ದು, ರಕ್ಷಣಾ ಇಲಾಖೆ ಅದನ್ನು ಬಹುತೇಕವಾಗಿ ಮಿಲಿಟರಿ ಶಾಲೆಯಾಗಿ ಪರಿವರ್ತನೆ ಮಾಡಲಿದೆ. ಹಾಸ್ಟೆಲ್ ವ್ಯವಸ್ಥೆ ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು 100 ಎಕರೆ ಪ್ರದೇಶದಲ್ಲಿ ಮಾಡಲಾಗುತ್ತಿದೆ ಎಂದರು.