ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು : ರೇಣುಕಾಚಾರ್ಯ

ಬೆಂಗಳೂರು,ಏ.13 : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಬೇಕೆಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಸಾವಿನ ಬಗ್ಗೆ ಅನುಕಂಪವಿದೆ.

ಅವರ ಸ್ನೇಹಿತರಿಬ್ಬರು ಏಕೆ ಬೇರೆ ಬೇರೆ ರೂಮ್‍ನಲ್ಲಿದ್ದರು ಎಂದು ಪ್ರಶ್ನಿಸಿ, ತನಿಖೆಯಾದರೆ ಸತ್ಯಾಂಶ ಹೊರಬಲಿದೆ ಎಂದರು. ಗುತ್ತಿಗೆದಾರ ಮಾಡಿರುವ ಆರೋಪ ಸಾಬೀತಾದ ಮೇಲೆ ಸಚಿವ ಈಶ್ವರಪ್ಪ ಅವರು ರಾಜೀನಾಮೆ ಕೊಡಬೇಕಷ್ಟೇ. ತನಿಖೆ ನಡೆದು ಸತ್ಯಾಂಶ ಹೊರಬಂದರೆ ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ನಿರ್ಧಾರ ಮಾಡುತ್ತಾರೆ ಎಂದು ಹೇಳಿದರು.

ಗುತ್ತಿಗೆದಾರರು ಪ್ರಧಾನಿಗೆ ದೂರು ನೀಡುವ ಮುನ್ನ ಕಾಂಗ್ರೆಸ್ ನಾಯಕರ ಮನೆಯಲ್ಲಿ ಡ್ರಾಫ್ಟ್ ಮಾಡಿದರು ಎಂದು ಗಂಭೀರ ಆರೋಪ ಮಾಡಿದರು.
ಈ ಬಗ್ಗೆ ತನಿಖೆಯಾದರೆ ಎಲ್ಲವೂ ಹೊರಬರಲಿದೆ, ಸತ್ಯಾಂಶವೂ ಗೊತ್ತಾಗುತ್ತದೆ. ಶೇ.40ರಷ್ಟು ಕಮೀಷನ್ ಎಂದು ಆರೋಪಿಸಿದ್ದಾರೆ. ಗುತ್ತಿಗೆದಾರರು ಶೇ.35ರ ಕಮೀಷನ್‍ಗೆ ಕೆಲಸ ಮಾಡುತ್ತಾರ ಎಂದು ಅವರು ಪ್ರಶ್ನಿಸಿದರು.

Gayathri SG

Recent Posts

ಪುತ್ತೂರು ಶಾಸಕರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ನಡೆದಿದೆ.

15 mins ago

ಪ್ರವಾಸಕ್ಕೆ ಬಂದಿದ್ದ ಮಹಿಳೆ ನೀರಿನಲ್ಲಿ ಮುಳುಗಿ ಮೃತ್ಯು

ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು ಮೃತಪಟ್ಟ  ಘಟನೆ ಮೈಸೂರಿನ ತಿ.ನರಸೀಪುರ ತಾಲೂಕಿನ ತಲಕಾಡು ಗ್ರಾಮದ ಕಾವೇರಿ ನದಿಯಲ್ಲಿ ನಡೆದಿದೆ.

31 mins ago

ಯುವಜನರನ್ನು ಆಧ್ಯಾತ್ಮಿಕ ಜಗತ್ತಿಗೆ ಕೊಂಡೊಯ್ದ ಗೊಸ್ಪೆಲ್ ಗಾಲಾ

ಆಧ್ಯಾತ್ಮಿಕ ವಿಚಾರದಿಂದ ದೂರ ಹೋಗುತ್ತಿರುವ ಯುವಜನರನ್ನು ಧಾರ್ಮಿಕ ವಿಚಾರಗಳತ್ತ ಸೆಳೆಯುವ ನಿಟ್ಟಿನಲ್ಲಿ ಕಲ್ಯಾಣಪುರ ವಲಯದ ಕ್ರೈಸ್ತ ಯುವಸಮುದಾಯಕ್ಕೆ ತೊಟ್ಟಂ ಸಂತ…

41 mins ago

ಜಾಗದ ತಕರಾರು: ನಗರಸಭಾ ಸದಸ್ಯನಿಂದ ದಂಪತಿ ಮೇಲೆ ಹಲ್ಲೆ, ಜೀವಬೆದರಿಕೆ

ಜಾಗದ ತಕರಾರಿಗೆ ಸಂಬಂಧಿಸಿ ದಂಪತಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ…

55 mins ago

ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ : ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆ

ತೀಯಾ ಸಮುದಾಯದ ಹದಿನೆಂಟು ಭಗವತೀ ಕ್ಷೇತ್ರಗಳಲ್ಲಿ ಒಂದಾದ ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ ಎರುಂಬು - ಅಳಿಕೆ ಬಂಟ್ವಾಳ…

1 hour ago

ಭಾರೀ ಗಾಳಿ ಮಳೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸಂಜೆ ಸುರಿದ ಜೋರಾದ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಪಲ್ಟಿಯಾದ…

1 hour ago