News Karnataka Kannada
Sunday, May 12 2024
ಬೆಂಗಳೂರು ನಗರ

ಸಂತೋಷ್‌ ಪಾಟೀಲ್‌ ಸಾವಿಗೆ ಈಶ್ವರಪ್ಪ ನೇರ ಕಾರಣ, ದೂರು ದಾಖಲಿಸಿ ಎಂದ ಸಿದ್ದರಾಮಯ್ಯ

Siddaramaih
Photo Credit :

ಬೆಂಗಳೂರು : ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪನವರೇ ಕಾರಣ ಎಂದು ವಾಟ್ಸಪ್ ಮೂಲಕ ಮೆಸೇಜ್ ಕಳಿಸಿ ಗುತ್ತಿಗೆದಾರ ಸಂತೋಷ್ ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಸಂತೋಷ್‌ ಪಾಟೀಲ್‌ ನೇರವಾಗಿ ಈಶ್ವರಪ್ಪ ಕಾರಣವೆಂದು ಡೆತ್‌ ನೋಟ್‌ನಲ್ಲಿ ಬರೆದಿದ್ದಾರೆ. ಅವರ ಮೇಲೆ 302ರಲ್ಲಿ ಕೇಸ್‌ ಹಾಕಬೇಕು. ಎಫ್‌ಐಆರ್‌ ದಾಖಲಿಸಿ ಬಂಧಿಸಿ. ಸಚಿವ ಸ್ಥಾನದಿಂದ ವಜಾ ಗೊಳಿಸುವಂತೆ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ  ವಿರುದ್ಧ ಶೇ.40ರಷ್ಟು ಗುತ್ತಿಗೆಗಳಲ್ಲಿ ಕಮೀಷನ್ ಕೇಳುತ್ತಿದ್ದಾರೆ. ಈ ಬಗ್ಗೆ ಸಚಿವ ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಕೇಂದ್ರದ ವರಿಷ್ಠರಿಗೂ ದೂರನ್ನು ಗುತ್ತಿಗೆದಾರ ಸಂತೋಷ್ ಮಾಡಿದ್ದರು. ಇದೀಗ ಅವರು ನನ್ನ ಸಾವಿಗೆ ಸಚಿವ ಈಶ್ವರಪ್ಪ ಅವರೇ ಕಾರಣ ಎನ್ನುವಂತ ಡೆತ್ ನೋಟ್ ವಾಟ್ಸಾಪ್ ಮಾಡಿ, ನಾಪತ್ತೆಯಾಗಿದ್ದರು. ಇದೀಗ ಅವರು ಉಡುಪಿಯ ಖಾಸಗಿ ಹೋಟೆಲ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು