ಸಂತೋಷ್ ಪ್ರಕರಣ: ಮೊದಲು ತನಿಖೆ, ನಂತರ ಸಂಬಂಧಪಟ್ಟವರ ವಿರುದ್ಧ ಕ್ರಮ- ಬಿ.ಸಿ.ಪಾಟೀಲ್

ಬೆಂಗಳೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ತನಿಖೆ ನಡೆಯುತ್ತಿದೆ. ಇದಾದ ನಂತರ ಸತ್ಯ ಹೊರಬರಲಿದೆ. ಯಾರೋ ಹೇಳಿದ್ದೆಲ್ಲ ಸತ್ಯವಲ್ಲ ಎಂದು ಸಚಿವ ಈಶ್ವರಪ್ಪ ಪರವಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ವಕಾಲತ್ತು ವಹಿಸಿದರು.

ರಾಜ್ಯ ಬಿಜೆಪಿ ಕಚೇರಿಯಲ್ಲಿ ಬುಧವಾರ ಕರೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲು ತನಿಖೆಯಾಗಬೇಕು. ನಂತರ ಈ ಪ್ರಕರಣದಲ್ಲಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮವಾಗಲಿದೆ ಎಂದರು.

ಮಾಧ್ಯಮಗಳಲ್ಲಿ ಈಶ್ವರಪ್ಪ ಹೇಳಿಕೆ ಗಮನಿಸಿದ್ದೇನೆಯೇ ಹೊರತು ಹೆಚ್ಚಿನ ಮಾಹಿತಿಯಿಲ್ಲ. ಸಂತೋಷ್ ನಮ್ಮ ಇಲಾಖೆಯಲ್ಲಿ ಗುತ್ತಿಗೆ ಪಡೆದಿಲ್ಲ ಎಂದು ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.

ನೊಂದ ಕುಟುಂಬದ ಜತೆ ನಾವಿದ್ದೇವೆ ಅವರ ಕಷ್ಟದಲ್ಲಿ ಭಾಗಿಯಾಗುತ್ತೇವೆ ಅದು ಬೇರೆ ವಿಷಯ ಆದರೆ ಆತ್ಮಹತ್ಯೆ ಯಾಕೆ ಆಗಿದೆ ಎಂದು ತನಿಖೆ ನಡೆಯುತ್ತಿದೆ, ತನಿಖೆ ಆದ ನಂತರ ಗೃಹ ಇಲಾಖೆ, ಮುಖ್ಯಮಂತ್ರಿಗಳು ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ ಎಂದು ಬಿ.ಸಿ.ಪಾಟೀಲ್ ಪುನರುಚ್ಚರಿಸಿದರು.

Gayathri SG

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

1 hour ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

1 hour ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

1 hour ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

2 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

2 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

3 hours ago