ಸಕಾಲದಲ್ಲಿ ರೈತರಿಗೆ ಬಿತ್ತನೆ ಬೀಜ ತಲುಪಿಸಿ: ಬಿ.ಸಿ.ಪಾಟೀಲ್

ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಪ್ರಾರಂಭವಾಗಿದ್ದು ರಾಜ್ಯದಲ್ಲಿ ನಿಗದಿತ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರ ದಾಸ್ತಾನು ಇದ್ದು ಸಕಾಲದಲ್ಲಿ ರೈತರಿಗೆ ಇವುಗಳನ್ನು ತಲುಪಿಸಲು ಕೃಷಿ ಸಚಿವರಾದ ಬಿ.ಸಿ. ಪಾಟೀಲ್ ಅವರು ತಿಳಿಸಿದರು.

ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆದ ರಾಜ್ಯಮಟ್ಟದ ಮುಂಗಾರು ಹಂಗಾಮಿನ ಕಾರ್ಯಾಗಾರ ಉದ್ದೇಶಿಸಿ ಮಾತನಾಡಿ ಅಧಿಕಾರಿಗಳಿಗೆ ಕಳಪೆ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳು ಸರಬರಾಜು ಆಗದಂತೆ ಕ್ರಮ ವಹಿಸಲುಅಧಿಕಾರಿಗಳಿಗೆ ಸೂಚಿಸಿದರು .

ಕೃಷಿ ಇಲಾಖೆಯ ಕಾರ್ಯದರ್ಶಿಗಳಾದ ಶಿವಯೋಗಿ ಕಳಸದ, ಅವರು ಕೃಷಿ ಇಲಾಖೆಯ ಎಲ್ಲಾ ಕಾರ್ಯಕ್ರಮಗಳಿಗೆ ಸರ್ಕಾರದ ಹಂತದಲ್ಲಿ ಅನುದಾನ ಸಕಾಲಕ್ಕೆ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದ್ದು ರೈತರಿಗೆ ಇಲಾಖೆ ಕಾರ್ಯಕ್ರಮಗಳನ್ನು ತಲುಪಿಸುವ ಜವಾಬ್ದಾರಿಯನ್ನು ಇಲಾಖೆ ಅಧಿಕಾರಿಗಳು ವಹಿಸಬೇಕೆಂದು ತಿಳಿಸಿದರು .

ಕೃಷಿ ಆಯುಕ್ತರಾದ ಬ್ರಿಜೇಶ್ ಕುಮಾರ್ ದಿಕ್ಷಿತ್ ಮಾತನಾಡಿ ಫಸಲ್ ಭೀಮಾ ಯೋಜನೆ ಮತ್ತು ಬೆಳೆ ಸಮೀಕ್ಷೆ ಕಾರ್ಯಕ್ರಮಗಳನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು ಹಾಗೂ ಬೆಳೆ ಸಮೀಕ್ಷೆಯನ್ನು ರೈತರೇ ಹೆಚ್ಚಾಗಿ ಮಾಡುವಂತೆ ಪ್ರೋತ್ಸಾಹಿಸಲು ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಜಲಾನಯನ ಇಲಾಖೆ ಆಯುಕ್ತರಾದ ವೆಂಕಟೇಶ್ ರವರು ಮಾತನಾಡಿ ಜಲಾನಯನ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ರಾಜ್ಯದ ಎಲ್ಲಾ ಜಿಲ್ಲೆಗಳ ಜಂಟಿ ಕೃಷಿ ನಿರ್ದೇಶಕರು, ಉಪ ಕೃಷಿ ನಿರ್ದೇಶಕರು, ಸಹಾಯಕ ಕೃಷಿ ನಿರ್ದೇಶಕರು ಸದರಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ಕೃಷಿ ಇಲಾಖೆಯ ನಿರ್ದೇಶಕರಾದ ಶ್ರೀಮತಿ ನಂದಿನಿ ಕುಮಾರಿ ಅವರು ಗಣ್ಯರನ್ನು ಸ್ವಾಗತಿಸಿದರು. ಕೃಷಿ ವಿಶ್ವವಿದ್ಯಾಲಯದ ಕುಲಪತಿ ರಾಜೇಂದ್ರಪ್ರಸಾದ್, ಕೃಷಿ ಇಲಾಖೆ ಹಿರಿಯ ಅಧಿಕಾರಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

Gayathri SG

Recent Posts

ಸಾಹಿತಿ, ಶಿಕ್ಷಕ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ ನಿಧನ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ಜಾನಪದ ವಿದ್ವಾಂಸ, ಸಾಹಿತಿ, ಶಿಕ್ಷಕ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ (79) ಮಂಗಳವಾರ…

27 seconds ago

ಆಟವಾಡ್ತಿದ್ದ ಮಗು ಅಪಹರಣ : ಮೂರೇ ದಿನದಲ್ಲಿ ಪತ್ತೆ ಹಚ್ಚಿದ ಬೀದರ್​ ಪೊಲೀಸ್

ಅಪಹರಣಕ್ಕೊಳಗಾದ ಮಗವನ್ನ ಮೂರು ದಿನದಲ್ಲಿಯೇ ಬಬೀದರ ನಗರ ಪೊಲೀಸರು ಪತ್ತೆ ಹಚ್ಚಿದ್ದಾರೆ. ಮೇ 4 ರಂದು ಬೀದರ್​ನ ಓಲ್ಡ್ ಸಿಟಿಯ…

12 mins ago

ಕೊರೊನಾ ವ್ಯಾಕ್ಸಿನ್ ಹಿಂಪಡೆದ ಅಸ್ಟ್ರಾಜೆನೆಕಾ : ಹೆಚ್ಚಿದ ಆತಂಕ

ಕೊರೊನಾ ವ್ಯಾಕ್ಸಿನ್ ಮತ್ತು ಕೋವಶೀಲ್ಡ್‌ ಪಡೆದವರಲ್ಲಿ ಅಡ್ಡಪರಿಣಾಮಗಳು ಕಾಣಿಸಿಕೊಳ್ಳುತ್ತವೆ ಎಂಬ ಮಾತಿಗೆ ಧಂಗಾಗಿರುವ ಜನರಿಗೆ ಇದೀಗ ಕೊರೊನಾ ವ್ಯಾಕ್ಸಿನ್ ಹಿಂಪಡೆದ…

1 hour ago

ಇಂದು ರೇವಣ್ಣ ಜಾಮೀನು ಅರ್ಜಿ ವಿಚಾರಣೆ : ಬೇಲಾ? ಜೈಲಾ? ಇಂದೇ ನಿರ್ಣಾಯಕ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ…

1 hour ago

ಪ್ರತಿಷ್ಠಿತ ಕಂಪನಿಗಳ ನಕಲು ದಂಧೆ : ಆರೋಪಿಗಳು ಸಿಬಿಐ ವಶ

ದಿನ ನಿತ್ಯ ಜನರು ಬಳಸುವ ವಸ್ತುಗಳನ್ನೇ ಟಾರ್ಗೆಟ್ ಮಾಡಿಕೊಂಡ ಗ್ಯಾಂಗ್​ವೊಂದು ಕಳೆದ ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ಬೀಡು ಬಿಟ್ಟಿತ್ತು. ಜೊತೆಗೆ…

2 hours ago

ಇಂದು ಬಿರುಗಾಳಿ ಸಹಿತ ಮಳೆ ಸಾಧ್ಯತೆ : ಹವಮಾನ ಇಲಾಖೆ ಎಚ್ಚರ

ದೇಶಾದ್ಯಂತ ಬಿರು ಬಿಸಿಲಿನ ಬೇಗೆಯಲ್ಲಿ ಬೆಂದ ಜನರಿಗೆ ಇದು ಸಿಹಿ ಸುದ್ದಿ ಆದರೆ ಎಚ್ಚರಿಕೆ ವಹಿಸುವುದು ಅಗತ್ಯ.ದೇಶದ ಹಲವು ರಾಜ್ಯಗಳಲ್ಲಿ…

2 hours ago