ಬೆಂಗಳೂರು; ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಬಿಜೆಪಿ ಶಾಸಕ, ಕಂದಾಯ ಸಚಿವ ಆರ್. ಅಶೋಕಗೆ ಕೋವಿಡ್ ಸೋಂಕು ತಗುಲಿದೆ.ನಗರದ ಖಾಸಗಿ ಆಸ್ಪತ್ರೆಗೆ ಅವರು ದಾಖಲಾಗಿದ್ದಾರೆ.
ಕೋವಿಡ್ ಸೋಂಕು ತಗುಲಿರುವ ಸಚಿವ ಆರ್. ಅಶೋಕ ಶುಕ್ರವಾರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ಎರಡು ದಿನದಿಂದ ಅಶೋಕ ಹಲವಾರು ಕಾರ್ಯಕ್ರಮ, ಸಭೆಗಳಲ್ಲಿ ಪಾಲ್ಗೊಂಡಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಜೊತೆ ಹಲವು ಕಾರ್ಯಕ್ರಮಗಳಲ್ಲಿ ವೇದಿಕೆ ಹಂಚಿಕೊಂಡಿದ್ದರು.