ಬೆಂಗಳೂರು : ಈಗಾಗಲೇ ಸಚಿವ ಆರ್ ಅಶೋಕ್, ಹೆಚ್.ನಾಗೇಶ್ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಬಳಿಕ ಸಚಿವ ಜೆ.ಸಿ.ಮಾಧುಸ್ವಾಮಿಯವರಿಗೂ ಕೊರೋನಾ ದೃಢಪಟ್ಟಿದೆ. ಹೀಗಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಚಿವ ಜೆ.ಸಿ.ಮಾಧುಸ್ವಾಮಿಯವರಿಗೂ ಕೋವಿಡ್ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಎ-ಸಿಂಪ್ಟಮ್ಯಾಟಿಕ್ ಆಗಿರುವಂತ ಅವರು, ಮುಂಜಾಗ್ರತಾ ಕ್ರಮವಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಂದಹಾಗೇ ನಿನ್ನೆ ಸಿಎಂ ಬಸವರಾಜ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿತ್ತು. ಇಂದು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ಇಂದು ದಾಖಲಾಗಿದ್ದಾರೆ. ಅಲ್ಲದೇ ಅವರ ಪುತ್ರ ಹಾಗೂ ಸೊಸೆಗೂ ಕೋವಿಡ್ ಪಾಸಿಟಿವ್ ಎಂದು ಪರೀಕ್ಷೆಯಲ್ಲಿ ದೃಢಪಟ್ಟಿದೆ.