News Karnataka Kannada
Saturday, May 04 2024
ಬೆಂಗಳೂರು ನಗರ

‘ಸಚಿವ ವಿ.ಸೋಮಣ್ಣ’ ಅವರಿಗೆ ಕೊರೋನಾ ಪಾಸಿಟಿವ್

Somanna
Photo Credit :

ಬೆಂಗಳೂರು: ವಸತಿ ಸಚಿವ ವಿ.ಸೋಮಣ್ಣ  ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದೆ. ಹೀಗಾಗಿ ಹೋಂ ಐಸೋಲೇಷನ್ ಆಗಿರೋದಾಗಿ ತಿಳಿದು ಬಂದಿದೆ.ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ  ಮಾಡಿಸಿಕೊಳ್ಳಿ ಮತ್ತು ಕೋವಿಡ್ ಸುರಕ್ಷತಾ ನಿಯಮಗಳನ್ನು ಪಾಲಿಸುವುದರ ಮೂಲಕ ಸುರಕ್ಷತೆಯಿಂದಿರಿ ಎಂದು ಹೇಳಿದ್ದಾರೆ.

ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು,ನನಗೆ ಕೋವಿಡ್- 19 ಸೋಂಕು ದೃಢಪಟ್ಟಿದೆ. ಸದ್ಯ ಹೋಮ್ ಕ್ವಾರಂಟೈನ್ ನಲ್ಲಿದ್ದು  ಆರೋಗ್ಯವಾಗಿದ್ದೇನೆ.

ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್ ಅಶೋಕ್, ಜೆಸಿ ಮಾಧುಸ್ವಾಮಿ, ಬಿ.ಸಿ.ನಾಗೇಶ್ ಸೇರಿದಂತೆ ಅನೇಕರಿಗೆ ಕೊರೋನಾ ಸೋಂಕು ತಗುಲಿತ್ತು. ಈ ಬಳಿಕ ಗುಣಮುಖರು ಆಗಿದ್ದಾರೆ. ಇದೀಗ ವಸತಿ ಸಚಿವ ವಿ.ಸೋಮಣ್ಣ ಅವರಿಗೂ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು