News Karnataka Kannada
Thursday, May 02 2024
ಬೆಂಗಳೂರು ನಗರ

ಸಚಿವ ಸಂಪುಟ ನಿರ್ಣಯದಂತೆ ಟೆಂಡರ್ ಪರಿಶೀಲನೆಗೆ ಎರಡು ಸಮಿತಿಗಳ ರಚನೆ : ಸಿಎಂ

Basavaraj Bommai
Photo Credit :

ಬೆಂಗಳೂರು: ಸಚಿವ ಸಂಪುಟದ ನಿರ್ಣಯದಂತೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಟೆಂಡರ್ ಅಂದಾಜು ಹಾಗೂ ಟೆಂಡರ್ ನಿಬಂಧನೆಗಳ ಪರಿಶೀಲನೆಗಾಗಿ ಎರಡು ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಗುರುವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಇಲಾಖೆಗಳ ಮುಖ್ಯಸ್ಥರ ಗಮನಕ್ಕೆ ತಂದು, ವಿಚಾರಣೆ ನಡೆಸಿ,ಯಾವುದೇ ತಪ್ಪು ಕಂಡುಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ. ನನ್ನ ಸರಕಾರ ಬಂದ ಮೇಲೆ ಯಾವುದೇ ಟೆಂಡರ್ ಅಂತಿಮವಾಗಿದ್ದರೆ, ಅದನ್ನು ವಿಶೇಷವಾಗಿ ಪರಿಶೀಲನೆ ಮಾಡಬೇಕೆಂದು ಸೂಚಿಸಲಾಗಿದೆ ಎಂದರು.

ಗುತ್ತಿಗೆದಾರರು ಪೂರೈಸಿದ ಕಾಮಗಾರಿ, ಸೀನಿಯಾರಿಟಿ ಆಧಾರದ ಮೇಲೆ ಸ್ವಯಂಚಾಲಿತವಾಗಿ ಬಿಲ್ ಬರುವಂತೆ ವ್ಯವಸ್ಥೆ ಮಾಡಲಾಗುವುದು. ಯಾವುದೇ ಟೆಂಡರ್ ವೇಳಾಪಟ್ಟಿಯೊಳಗೆ ಟೆಂಡರ್ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳಬೇಕು. ಇಲ್ಲವಾದಲ್ಲಿ ವೃಥಾ ಸಂಶಯಕ್ಕೆ ಎಡೆಮಾಡಿಕೊಟ್ಟಂತಾಗುತ್ತದೆ.ಈ ಬಗ್ಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ತಿಳಿಸಿದರು.

ಟೆಂಡರ್ ಪ್ರಕ್ರಿಯೆಯಲ್ಲಿ ಅವ್ಯವಹಾರವಾಗಿದ್ದಲ್ಲಿ ವಿಚಾರಣೆಯ ಸಂದರ್ಭದಲ್ಲಿ ಸತ್ಯ ಹೊರಬೀಳುತ್ತದೆ. ಆದರೆ ಗುತ್ತಿಗೆದಾರರ ಪತ್ರದಲ್ಲಿ ಇಂತಹ ಯಾವುದೇ ಪ್ರಕರಣದ ಬಗ್ಗೆ ನಿಖರವಾದ ಮಾಹಿತಿ ಇಲ್ಲ. ಆದರೂ ಈ ಬಗ್ಗೆ ವಿಚಾರಣೆ ನಡೆಸಲು ಆದೇಶ ನೀಡಲಾಗಿದೆ ಎಂದು ತಿಳಿಸಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು