ಬೆಂಗಳೂರು : ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಸಂಬಂಧ ನಮ್ಮ ಮುಖ್ಯಮಂತ್ರಿಗಳು, ನಾಯಕರು, ಹೈಕಮಾಂಡ್ ಕುಳಿತು ಚರ್ಚೆ ಮಾಡಿ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೋ ಆ ತೀರ್ಮಾನಕ್ಕೆ ನಾವು ಬದ್ಧ. ನಮ್ಮ ಪಕ್ಷದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ನಾವು ಬದ್ಧ ಎಂದು ಹೇಳಿದ್ದಾರೆ.
ಭ್ರೂಣ ಪತ್ತೆಗ ಕಡಿವಾಣ ಹಾಕಬೇಕು. ಹೆಣ್ಣು ಮಕ್ಕಳ ಲಿಂಗಾನುಪಾತ ಹೆಚ್ಚು ಮಾಡಬೇಕಿದೆ. ಹೆಣ್ಣುಮಕ್ಕಳಿಗೆ ಸಮಾನ ಹಕ್ಕು ನೀಡಲು ರಾಜ್ಯ ಸರ್ಕಾರ ಬದ್ಧವಾಗಿದೆ. ಭ್ರೂಣ ಪತ್ತೆ ಮಾಡುವ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೋಳ್ಳುವುದು. ಜೊತೆಗೆ ಭ್ರೂಣ ಪತ್ತೆ ಮಾಡುವ ಆಸ್ಪತ್ರೆಗಳ ಲೈಸೆನ್ಸ್ ರದ್ದು ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.