ಸಮ್ಮಿಶ್ರ ಸರ್ಕಾರಕ್ಕೆ ಕಾದಿದೆ ದೊಡ್ಡ ಆಪತ್ತು!

ಬೆಂಗಳೂರು: ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಸಮಗ್ರ ಮಾಹಿತಿಯನ್ನು ರಾಷ್ಟ್ರಪತಿ ಅವರಿಗೆ ಕಳುಹಿಸಿಕೊಟ್ಟು, ಸರ್ಕಾರದ ವಿರುದ್ಧ ಕ್ರಮಕೈಗೊಳ್ಳಲು ಸೂಚಿಸಲಾಗುವುದು ಎಂದು ಹೈಕೋರ್ಟ್ ಎಚ್ಚರಿಸಿದೆ.

ಅಧಿಕಾರಿಗಳ ವರ್ಗಾವಣೆಯನ್ನು ರಾಜ್ಯ ಸರ್ಕಾರವು ಒಂದು ದಂಧೆಯನ್ನಾಗಿ ಮಾಡಿದೆ. ಈ ವಿಷಯವನ್ನು ರಾಜ್ಯಪಾಲರ ಗಮನಕ್ಕೆ ತರಲಾಗುವುದು ಮತ್ತು ಇದರ ಸಮಗ್ರ ವರದಿಯನ್ನು ರಾಷ್ಟ್ರಪತಿಗಳಿಗೆ ಕಳುಹಿಸಿಕೊಡಲು ಸೂಚಿಸಲಾಗುವುದು ಎಂದು ಹೈಕೋರ್ಟ್ ಹೇಳಿದೆ.

ನ್ಯಾಯಮೂರ್ತಿ ಎಚ್. ಜಿ. ರಮೇಶ್ ಹಾಗೂ ನ್ಯಾಯಮೂರ್ತಿ ಅಶೋಕ್ ಜಿ. ನಿಜಗಣ್ಣನವರ ಅವರಿದ್ಧ ವಿಭಾಗೀಯ ನ್ಯಾಯಪೀಠವು ಸೋಮವಾರ ವಿಚಾರಣೆ ನಡೆಸಿ, 2018-19ರ ಸಾಲಿನ ವಲಯ ಅರಣ್ಯಾಧಿಕಾರಿಗಳ ವರ್ಗಾವಣೆ ಸಂಬಂಧಿಸಿದಂತೆ ವಿಚಾರಣೆ ನಡೆಸಿತು.

ರಾಜ್ಯ ಸರ್ಕಾರವು ತನ್ನನ್ನು ಕೇಳೋರೇ ಇಲ್ಲ ಎನ್ನುವ ರೀತಿಯಲ್ಲಿ ವರ್ಗಾವಣೆ ಮಾಡುತ್ತಿದೆ. ಅಧಿಕಾರಿಗಳು ಕೆಲಸ ಮಾಡದೆ ಸಂಬಳ ಪಡೆಯುತ್ತಿದ್ದಾರೆ. ಹೈಕೋರ್ಟ್ ಈ ವಿಚಾರವಾಗಿ ಎಚ್ಚರಿಸಿ ಸುಸ್ತಾಗಿ ಹೋಗಿದೆ. ಇನ್ನು ಸಹಿಸಲು ಆಗದು. ಇದರ ಸಂಪೂರ್ಣ ಮಾಹಿತಿ ರಾಜ್ಯಪಾಲರ ಗಮನಕ್ಕೆ ತರಲಾಗುವುದು. ಅವರು ರಾಷ್ಟ್ರಪತಿಗೆ ಮಾಹಿತಿ ಒದಗಿಸುವರು ಎಂದು ಹೈಕೋರ್ಟ್ ತಿಳಿಸಿದೆ.

Desk

Recent Posts

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಸಾಗಾಟ: ಚಾಲಕನಿಗೆ ತರಾಟೆ

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಕೊಂಡೊಯ್ದ ಘಟನೆಯೊಂದು ಉಡುಪಿ ಜಿಲ್ಲೆಯ ಗಡಿಭಾಗ ಶಿರೂರು ಟೋಲ್ ಗೇಟ್ ಬಳಿ ನಡೆದಿದೆ.

6 mins ago

ಕರ್ನಾಟಕದ ಎಲ್ಲಾ ಭಾಷೆಗಳಲ್ಲಿಯೇ ವೈಶಿಷ್ಟ್ಯ ಪಡೆದ ಲಂಬಾಣಿ ಭಾಷೆ

ರಾಜ್ಯದಲ್ಲಿ ಅತಿ ಹೆಚ್ಚು ಬಳಕೆಯಲ್ಲಿರುವ ಏಳು ಭಾಷೆಗಳ ಪೈಕಿ ಲಂಬಾಣಿ ಭಾಷೆಯೂ ಒಂದಾಗಿದ್ದು, ಕಲ್ಯಾಣ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಈ…

17 mins ago

ಜಿಲ್ಲಾಧಿಕಾರಿಗಳಿಂದ ವಿಶ್ವಗುರು ಬಸವಣ್ಣನಿಗೆ ಪುಷ್ಪ ನಮನ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 891 ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ…

34 mins ago

ಮದುವೆ ಮನೆಯ ಊಟ ಸೇವಿಸಿ ನೂರಾರು ಮಂದಿ ಅಸ್ವಸ್ಥ

ಮದುವೆ ಮನೆಯಲ್ಲಿ ಊಟ ಮಾಡಿದ ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಕಾಲ್ಗೆರೆ ಗ್ರಾಮದಲ್ಲಿ ನಡೆದಿದೆ.

45 mins ago

ಕಾಂಗ್ರೆಸ್ ಪರ ಮತ ಹಾಕಿಸಿದ್ದಕ್ಕೆ ಯುವಕನ ಕೊಲೆ

ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25)ಹತ್ಯೆಯಾದವನು. ಕಲಬುರಗಿಯ ಅಫಜಲಪುರ…

59 mins ago

ಆನ್‌ಲೈನ್ ಟ್ರೇಡಿಂಗ್: 17.35 ಲಕ್ಷ ರೂ. ವಂಚನೆ

ಆನ್‌ಲೈನ್ ಪಾರ್ಟ್‌ಟೈಮ್ ಕೆಲಸ ಹಾಗೂ ಆನ್‌ಲೈನ್ ಟ್ರೇಡಿಂಗ್ ಮೇಸೆಜ್ ನ‌ ಬಲೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 17.35 ಲಕ್ಷ ರೂ.…

1 hour ago