News Karnataka Kannada
Monday, April 29 2024
ಬೆಂಗಳೂರು ನಗರ

ಸಾಧಕ ಮಹಿಳೆಯರಿಗೆ ಕೃಷಿ ಪಂಡಿತ ಪ್ರಶಸ್ತಿ

Krushi
Photo Credit :

ಬೆಂಗಳೂರು: ಪ್ರತಿ ವರ್ಷದಂತೆ ಈ ಬಾರಿಯೂ ಕೃಷಿಯಲ್ಲಿ ಸಾಧನೆಗೈದ ಕೃಷಿಕರಿಗೆ ಕೃಷಿ ಪಂಡಿತ ಪ್ರಶಸ್ತಿ ನೀಡಲು ಸರ್ಕಾರ ತೀರ್ಮಾನಿಸಿದ್ದು, ಅರ್ಹ ಕೃ಼ಷಿಕರು ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ.

2022-23ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿ ಇದಾಗಿದ್ದು, ರಾಜ್ಯದಲ್ಲಿ ಕೃಷಿ ಕ್ಷೇತ್ರದಲ್ಲಿ ವಿನೂತನ, ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಭಿನ್ನ ಸಾಧನೆ ಮಾಡಿದ ಸೃಜನಶೀಲ ರೈತ, ರೈತ ಮಹಿಳೆಯರಿಗೆ ಕೃಷಿ ಇಲಾಖೆಯು  “ಕೃಷಿ ಪಂಡಿತ” ಪ್ರಶಸ್ತಿಯನ್ನು ನೀಡುತ್ತಿದೆ.

ಈ ಬಾರಿಯಿಂದ ಕೃಷಿಯಲ್ಲಿ ತೊಡಗಿಸಿಕೊಂಡಿರುವ ರೈತ ಮಹಿಳೆಯರನ್ನು ಪ್ರೋತ್ಸಾಹಿಸುವ ಸಲುವಾಗಿ ಹಾಗೂ ಮಹಿಳೆಯರನ್ನು ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ರೈತ ಮಹಿಳೆಯರಿಗೆ “ಕೃಷಿ ಪಂಡಿತ” ಪ್ರಶಸ್ತಿಯನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರೈತ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ “ಕೃಷಿ ಪಂಡಿತ” ಪ್ರಶಸ್ತಿಗೆ ಅರ್ಜಿಗಳನ್ನು ಸಲ್ಲಿಸುವ ಮುಖಾಂತರ ಕಾರ್ಯಕ್ರಮದ ಪ್ರಯೋಜನವನ್ನು ಪಡೆಯಬಹುದಾಗಿದೆ.

ಅರ್ಜಿಗಳನ್ನು ಸಲ್ಲಿಸಲು ಜುಲೈ 22 ಕೊನೆಯ ದಿನಾಂಕವಾಗಿದೆ. ಅರ್ಜಿ ನಮೂನೆ, ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು, ಸ್ಪರ್ಧಿಸಲು ಅರ್ಹತೆ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು