ಬೆಂಗಳೂರು : ಸಾರ್ವಜನಿಕ ಪ್ರದೇಶಗಳಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು, ಓರ್ವ ಮಾದಕ ವ್ಯಸನಿ ಸೇರಿದಂತೆ ಆರೋಪಿಗಳನ್ನು ಯಲಹಂಕ ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ.
ಬಂಧಿತರನ್ನು ಉಡೇ ಉಡೇ ಊಜಾ(36), ಎಕೆಚುಕ್ವು ಡೇನಿಯಲ್(39), ತಸ್ಲೀಂ(20), ಮೊಹಮ್ಮದ್ ಉಮರ್ ಮುಕ್ತಿಯಾರ್(23) ಎಂದು ಗುರ್ತಿಸಲಾಗಿದೆ.
ಆರೋಪಿಗಳಿಂದ 2.85 ಲಕ್ಷ ರೂ. ಮೌಲ್ಯದ 105 ಗ್ರಾಂ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಈ ಕುರಿತು ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಡಿಸಿಪಿ ಅನೂಪ್ ಶೆಟ್ಟಿ ಹೇಳಿದ್ದಾರೆ.