ಸಿಎಂ ಬೊಮ್ಮಾಯಿಗೆ ಕರೆ ಮಾಡಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ ಯೋಗಿ

ಬೆಂಗಳೂರು : ಯೋಗಿ ಆದಿತ್ಯನಾಥ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿದ್ದು, ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸುವಂತೆ ಸೋಮವಾರ ಆಹ್ವಾನ ನೀಡಿದ್ದಾರೆ.

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಯೋಗಿ ಆದಿತ್ಯನಾಥ್ ಅವರು 2ನೇ ಬಾರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

ಮಾರ್ಚ್ 25ರಂದು ನಡೆಯಲಿರುವ ಮುಖ್ಯಮಂತ್ರಿ ಪ್ರಮಾಣ ವಚನ ಕಾರ್ಯಕ್ರಮಗಳಿಗೆ ಸಿದ್ಧತೆಗಳು ಭರದಿಂದ ಸಾಗಿದ್ದು, ಈ ಸಮಾರಂಭದಲ್ಲಿ ಬಿಜೆಪಿ ಹಿರಿಯ ನಾಯಕರು, ಕೇಂದ್ರ ಮಂತ್ರಿಗಳು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸುವಂತೆ ನಿನ್ನೆ ಆಹ್ವಾನ ನೀಡಿದ್ದಾರೆ. ಲಖನೌದಲ್ಲಿ ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಿಎಂ ಬಸವರಾಜ ಬೊಮ್ಮಾಯಿ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Gayathri SG

Recent Posts

ನಟಿ ಮಾಳವಿಕಾ ಅವಿನಾಶ್ ತಂದೆ ನಟೇಶನ್ ಗಣೇಶನ್ ನಿಧನ

ರಾಜ್ಯ ಬಿಜೆಪಿ ಉಪಾಧ್ಯಕ್ಷ, ನಟಿ, ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.

7 mins ago

ಪತ್ನಿಯ ಗುಪ್ತಾಂಗವನ್ನು ಮೊಳೆಗಳಿಂದ ವಿರೂಪಗೊಳಿಸಿ,ಬೀಗ ಹಾಕಿದ ಕ್ರೂರ ಪತಿ

ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…

23 mins ago

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

30 mins ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

48 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

53 mins ago

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

1 hour ago