ಬೆಂಗಳೂರು: ಸೋಮವಾರ ಲಿಂಗೈಕ್ಯರಾದ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಅಂತಿಮ ದರ್ಶನವನ್ನು ಪಡೆಯಲು ಪ್ರಧಾನಿ ನರೇಂದ್ರ ಮೋದಿ ಅವರು ಬಾರದೇ ಇದ್ದದ್ದು ಸರಿಯಲ್ಲ. ಇದರಿಂದ ಶ್ರೀಗಳಿಗೆ, ಸಮಾಜಕ್ಕೆ ಅಗೌರವ ಮೋದಿ ತೋರಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಎಂದು ಹೇಳಿದರು.
ಅವರು ನೇತಾಜಿ ಸುಭಾಷ್ ಚಂದ್ರಬೋಸ್ 122ನೇ ಜನ್ಮದಿನಾಚರಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಈಚೆಗೆ ರೆಸಾರ್ಟ್ ನಲ್ಲಿ ಕೈ ಶಾಸಕರ ಮಧ್ಯೆ ನಡೆದ ಹೊಡೆದಾಟದ ಕುರಿತು ಪ್ರತಿಕ್ರಿಯಿಸಿದ ಅವರು, ಈ ಕುರಿತು ಎಫ್ ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೆಪಿಸಿಸಿ ಕೂಡ ಸೂಕ್ತ ಕ್ರಮಕ್ಕೆ ಒತ್ತಾಯ ಮಾಡಿದೆ.
ಈ ರೀತಿಯ ಕೀಳುಮಟ್ಟದ ರಾಜಕಾರಣ ರಾಜಕೀಯ ಮೌಲ್ಯಗಳನ್ನು ಕಳೆದುಕೊಳ್ಳುವಂತೆ ಮಾಡುತ್ತಿದೆ ಎಂದರು.