ಸಿ.ಎಸ್.ಆರ್. ನಿಧಿ ಪರಿಕಲ್ಪನೆಯಿಂದ ಸಮಾಜದ ಅಭಿವೃದ್ಧಿ ಸಾಧ್ಯ : ಮುಖ್ಯಮಂತ್ರಿ

ಬೆಂಗಳೂರು: ಸಿ.ಎಸ್.ಆರ್. ನಿಧಿ ಪರಿಕಲ್ಪನೆಯಿಂದ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ತಿಳಿಸಿದರು. ಅವರು ಬೆಂಗಳೂರು ಸಿಎಸ್ಆರ್ ಲೀಡರ್ ಶಿಪ್ ಸಮ್ಮಿಟ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕೊಡುವುದು ನಮ್ಮ ಸಂಸ್ಕೃತಿ. ಆದರೆ ಎಲ್ಲಿ, ಹೇಗೆ ಹಾಗೂ ಏನನ್ನು ಕೊಡುವುದು ಎನ್ನುವುದು ಮುಖ್ಯವಾಗುತ್ತದೆ. ತಾವು ಮಾಡಿದ ಒಳ್ಳೆಯ ಕೆಲಸದಿಂದ ಆಗುವ ಪ್ರಯೋಜನದ ಬಗ್ಗೆ ಯೋಚಿಸಿದಾಗ ಸಂತೋಷವಾಗುವುದಲ್ಲದೆ ಇನ್ನಷ್ಟು ಒಳ್ಳೆಯ ಕೆಲಸ ಮಾಡಲು ಪ್ರೇರಣೆ ನೀಡುತ್ತದೆ ಎಂದರು.

ದಾನದ ಉದ್ದೇಶ ನಮಗೆ ತಿಳಿದಿರಬೇಕು. ಅದು ನಮ್ಮನ್ನು ನಮ್ಮ ಗುರಿಯತ್ತ ಒಯ್ಯಬೇಕು. ಸಹಾಯ ಪಡೆಯುವವರಿಗಿಂತ ಸಹಾಯ ಮಾಡಿದವರ ಬಗ್ಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು ಎಂದರು.

ಸಿಎಸ್ ಆರ್ ಕೇವಲ ಆರ್ಥಿಕ ನೆರವು ಮಾತ್ರವಲ್ಲ ಒಳ್ಳೆಯ ಕೃತ್ಯ ಹಾಗೂ ವ್ಯಕ್ತಿತ್ವವನ್ನೂ ನಿರ್ಮಾಣ ಮಾಡುತ್ತದೆ. ಜನರಲ್ಲಿ ಒಳ್ಳೆಯ ವ್ಯಕ್ತಿತ್ವದ ನಿರ್ಮಾಣದಿಂದ ಉತ್ತಮ ರಾಷ್ಟ್ರ ನಿರ್ಮಾಣವಾಗುತ್ತದೆ. ಈಗಿನ ಆಧುನಿಕ ಯುಗದಲ್ಲಿ ಹೊಸ ಸವಾಲುಗಳಿಗೆ ಹೊಸ ಪರಿಹಾರಗಳನ್ನು ಕಂಡುಕೊಳ್ಳಬೇಕಾಗಿದೆ. ನಮ್ಮ ಹಿರಿಯರಲ್ಲಿದ್ದಂತೆ ನಮ್ಮಲ್ಲಿರುವ ನೀತಿ ಹಾಗೂ ಮೌಲ್ಯಗಳು ಉತ್ತಮವಾದುದ್ದಾಗಿದೆ ಎದು ಎಂದರು.

ವ್ಯಕಿಯೊಬ್ಬ ಮೊದಲು ತನ್ನ ಕುಟುಂಬದವರಿಗೆ ಸಹಾಯ ಮಾಡಬೇಕು. ಆ ನಂತರವೇ ಅವರು ಮತ್ತೊಬ್ಬರಿಗೆ ನೆರವು ನೀಡಲು ಸಾಧ್ಯವಾಗುವುದು. ತಮ್ಮ ಜವಾಬ್ದಾರಿಗಳನ್ನು ಸರಿಯಾಗಿ ನಿರ್ವಹಿಸಿ ಸಮಾಜದಿಂದ ಪಡೆದದ್ದನ್ನು ಸಮಾಜಕ್ಕೆ ಹಿಂತಿರುಗಿಸಬೇಕು. ಹಣವನ್ನೇ ಕೊಡಬೇಕು ಎಂದಿಲ್ಲ. ಮಾನವೀಯ ವರ್ತನೆಯಿಂದ ಮಾನವ ಶಕ್ತಿಯನ್ನು ವೃದ್ಧಿಸಿ ಅಭಿವೃದ್ಧಿಯನ್ನು ಕೈಗೊಳ್ಳಬೇಕು ಎಂದರು.

ಭವಿಷ್ಯಕ್ಕಾಗಿ ಮಾಡುವ ಹೂಡಿಕೆ: ಜನಪ್ರಿಯ ಯೋಜನೆಗಳಾದ ಮಧ್ಯಾಹ್ನದ ಬಿಸಿಯೂಟ, ಪೌಷ್ಟಿಕ ಆಹಾರ, ಸಮವಸ್ತ್ರ, ಸೈಕಲ್ ವಿತರಣೆ ಮುಂತಾದ ಕಾರ್ಯಕ್ರಮಗಳನ್ನು ‘ವ್ಯರ್ಥ ವೆಚ್ಚ’ ಎಂದು ವ್ಯಾಖ್ಯಾನಿಸಿದ ಆರ್ಥಿಕ ತಜ್ಞರಿದ್ದಾರೆ. ಆದರೆ ಇದು ಹೂಡಿಕೆ ಎಂದು ಭಾವಿಸಿರುವುದಾಗಿ ಮುಖ್ಯ ಮಂತ್ರಿಗಳು ತಿಳಿಸಿದರು.

ಮಕ್ಕಳು ಭವಿಷ್ಯದ ನಾಗರಿಕರು. ಅವರು ಸ್ವಸ್ಥವಾಗಿಲ್ಲದಿದ್ದರೆ ಈ ದೇಶಕ್ಕೆ ಭವಿಷ್ಯವಿಲ್ಲ. ಮಕ್ಕಳು ಬೆಳೆಯಲು ನಾವು ನೆರವಾಗಬೇಕು. ಅನಾರೋಗ್ಯ ಪೀಡಿತ ಮಗು ದೇಶದ ಬೆಳೆವಣಿಗೆಗೆ ವೇಗ ನಿಯಂತ್ರಕವಿದ್ದಂತೆ. ಆರೋಗ್ಯವಂತ ಮಗು ಅಭಿವೃದ್ಧಿಗೆ ಏಣಿ ಇದ್ದಂತೆ ಎಂದು ಅಭಿಪ್ರಾಯ ಪಟ್ಟರು.

ಮಹಿಳೆಯರಿಗೆ ಆರ್ಥಿಕ ನೆರವು ನೀಡಿ ಬಡ ಮಹಿಳೆಯರೂ ಸುಸ್ಥಿರ ಜೀವನ ನಡೆಸುವುದಲ್ಲದೆ, ರಾಜ್ಯದ ಜಿ.ಡಿ.ಪಿ.ಗೆ ಕೊಡುಗೆ ನೀಡುವಂತವಾಗಬೇಕು. ಈ ಯೋಜನೆ ರಾಷ್ಟದ ಅಭಿವೃದ್ಧಿಯಲ್ಲಿ ಹೊಸ ಅಧ್ಯಾಯವಾಗಲಿದೆ ಎಂದು ಸಿಎಂ ಹೇಳಿದರು.

ನೀತಿ ಆಯೋಗದ ಉಪಾಧ್ಯಕ್ಷ ಡಾ. ರಾಜೀವ್ ಕುಮಾರ್, ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಷಾ, ಸ್ಟಾರ್ಟ್ ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಉಪಸ್ಥಿತರಿದ್ದರು.

Sneha Gowda

Recent Posts

ನಗರ ಸಾರಿಗೆ ಬಸ್‌ ಮಾರ್ಗ ಬದಲಾಯಿಸಲು ಆಗ್ರಹ

ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್‌ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು…

10 mins ago

ನಟಿ ಮಾಳವಿಕಾ ಅವಿನಾಶ್ ತಂದೆ ನಟೇಶನ್ ಗಣೇಶನ್ ನಿಧನ

ರಾಜ್ಯ ಬಿಜೆಪಿ ಉಪಾಧ್ಯಕ್ಷ, ನಟಿ, ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.

18 mins ago

ಪತ್ನಿಯ ಗುಪ್ತಾಂಗವನ್ನು ಮೊಳೆಗಳಿಂದ ವಿರೂಪಗೊಳಿಸಿ,ಬೀಗ ಹಾಕಿದ ಕ್ರೂರ ಪತಿ

ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…

35 mins ago

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

41 mins ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

60 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

1 hour ago