ಸುಳ್ಳು ಸುದ್ದಿ ಹರಡಿ ನನ್ನನ್ನು ತೇಜೋವಧೆ ಮಾಡಿದವರ ಮೇಲೆ ಮಾನನಷ್ಟ ಕೇಸ್: ರವಿ ಚನ್ನಣ್ಣನವರ್‌

ಬೆಂಗಳೂರು(ಫೆ.01) : ಇತ್ತೀಚಿಗೆ ಸಾಮಾಜಿಕ ತಾಲತಾಣಗಳಲ್ಲಿ ಕೆಲ ವ್ಯಕ್ತಿಗಳು ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಆಧಾರರಹಿತ ಆರೋಪವು ದುರುದ್ದೇಶದಿಂದ ಕೂಡಿದೆ ಎಂದು ಐಪಿಎಸ್‌ ಅಧಿಕಾರಿ ರವಿ ಚನ್ನಣ್ಣನವರ್‌ ಸ್ಪಷ್ಟಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ನನ್ನ ತಂದೆ-ತಾಯಿಯವರ ಹೆಸರಿನಲ್ಲಿರುವ ಕೆಲ ಪಹಣಿ ಹಾಕಿ ನನ್ನ ವಿರುದ್ಧ ಆರೋಪಿಸಿದ್ದಾರೆ. ಈ ಆಸ್ತಿಗಳೆಲ್ಲ ಕಾನೂನುಬದ್ಧವಾಗಿಯೇ ಖರೀದಿಸಿದ್ದು, ಅವು ಪಿತ್ರಾರ್ಜಿತ ಹಾಗೂ ಸ್ವಯಾರ್ಜಿತ ಆಸ್ತಿಗಳಾಗಿವೆ. ಅಲ್ಲದೆ ಆಯಾ ವರ್ಷವೇ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿದ್ದೇನೆ ಎಂದು ಖಚಿತಪಡಿಸಿದ್ದಾರೆ.

ಈ ಆಸ್ತಿಗಳನ್ನು ನಾನು ಭ್ರಷ್ಟ ರೀತಿಯಿಂದ ಸಂಪಾದಿಸಿದ್ದೇನೆ ಎಂದು ಸುಳ್ಳು ಸುದ್ದಿಗಳನ್ನು ಹರಡಿ ನನ್ನನ್ನು ತೇಜೋವಧೆ ಮಾಡಬೇಕು ಎಂದೇ ಸಾಮಾಜಿಕ ಜಾಲತಾಣಗಳಲ್ಲಿ ಬಿಂಬಿಸಲಾಗುತ್ತಿದೆ. ನಾನೊಬ್ಬ ಅಖಿಲ ಭಾರತೀಯ ಸೇವಕನಾಗಿದ್ದು, ಸೇವಾ ನಿಯಮಗಳಡಿ ವರ್ತಿಸಬೇಕಾಗಿದೆ. ನನ್ನ ಕರ್ತವ್ಯ ಆದ್ದರಿಂದ ಈ ಕುರಿತಂತೆ ನಾನು ಇದಾವುದಕ್ಕೂ ನಾನು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸದೇ ಕಾನೂನು ಬದ್ಧವಾಗಿ ಕ್ರಮ ಕೈಗೊಂಡಿದ್ದೇನೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ನಾನು ಈಗಾಗಲೇ ಕಾನೂನಾತ್ಮಕವಾಗಿ ನಮ್ಮ ನ್ಯಾಯವಾದಿಗಳ ಮೂಲಕ ಲೀಗಲ್‌ ನೋಟಿಸ್‌ ನೀಡಿದ್ದೇನೆ. ಇದಕ್ಕೆ ಉತ್ತರ ಬಂದಿಲ್ಲ. ಈ ಸುಳ್ಳು ಆರೋಪ ಸಂಬಂಧ ನ್ಯಾಯಾಲಯದಲ್ಲಿ 3 ಕೋಟಿ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿರುತ್ತೇನೆ. ಸುಳ್ಳು ಆಪಾದನೆ ಮಾಡಿದ್ದಕ್ಕೆ ಎರಡು ವರ್ಷಗಳು ಜೈಲು ಶಿಕ್ಷೆ ವಿಧಿಸುವಂತೆ ಸಂಬಂಧಪಟ್ಟ ನ್ಯಾಯಾಲಯದಲ್ಲಿ ಕ್ರಿಮಿನಲ್‌ ಮಾನ ಹಾನಿ ಪ್ರಕರಣ ದಾಖಲಿಸಿದ್ದೇನೆ ಎಂದು ಹೇಳಿದ್ದಾರೆ.

ನನಗೆ ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆ ಇದೆ. ನ್ಯಾಯಾಲಯ ತೀರ್ಪು ಕೊಡುವವರೆಗೆ ಎಲ್ಲ ಸುಳ್ಳು ಸುದ್ದಿಗಳನ್ನು ನಂಬಬೇಡಿ. ಮಾಧ್ಯಮಗಳು ಪ್ರಚಾರ ಮಾಡದಂತೆ ತಡೆಯಾಜ್ಞೆ ತಂದದ್ದು ಅವುಗಳ ಅಭಿವ್ಯಕ್ತಿ ಸತ್ವವನ್ನು ಕುಗ್ಗಿಸಲು ಅಲ್ಲ. ಅನೇಕ ಸಂಕಷ್ಟಗಳ ನಡುವೆ ಬೆಳೆದ ನಾನು ನನ್ನ ಸ್ವಾಭಿಮಾನ ಮತ್ತು ವ್ಯಕ್ತಿತ್ವದ ಬಗ್ಗೆ ಸದಾ ಎಚ್ಚರದಲ್ಲಿ ಇದ್ದೇನೆ. ಕೆಲವು ಸುಳ್ಳು ಸುದ್ದಿಗಳು ನನ್ನ ಬಗ್ಗೆ ಹರಿದಾಡಿದ ಕಾರಣ ನಾನು ತಡೆಯಾಜ್ಞೆ ತಂದದ್ದನ್ನು ಅನ್ಯತಾ ಭಾವಿಸರಬಾರದು ಎಂದಿದ್ದಾರೆ.

ನನಗೆ ನ್ಯಾಯವಾದಿಗಳ ಬಗ್ಗೆ, ಸ್ವಚ್ಛ ವ್ಯವಸ್ಥೆ ಬಯಸುವವರ ಬಗ್ಗೆ ಅಪಾರ ಗೌರವವಿದೆ. ಈ ಮೂಲಕ ನನ್ನ ಆತ್ಮೀಯರೆಲ್ಲರಿಗೂ ತಾವು ದಯಮಾಡಿ ಯಾವುದೇ ಪ್ರತಿಕ್ರಿಯೆ ನೀಡಬಾರದು. ಆಶ್ಲೀಲ ಪದ ಬಳಕೆ ಹಾಗೂ ಹೀಯಾಳಿಸುವುದನ್ನು ಮಾಡಬಾರದು ಎಂದು ರವಿ ಚನ್ನಣ್ಣನವರ್‌ ವಿನಂತಿಸಿದ್ದಾರೆ.

Gayathri SG

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

3 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

3 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

4 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

5 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

5 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

6 hours ago