ಸೋನಿಯಾ ಗಾಂಧಿ ಜನ್ಮ ದಿನ: ಯುವ ಕಾಂಗ್ರೆಸಿಂದ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

ಬೆಂಗಳೂರು: ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಜನ್ಮ ದಿನದ ಪ್ರಯುಕ್ತ ರಾಜ್ಯ ಯುವ ಕಾಂಗ್ರೆಸ್ ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದ ಬಾಣಸವಾಡಿಯಲ್ಲಿ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಿತ್ತು.

ನಗರದ ಸರ್ವಜ್ಞ ನಗರದ ಬಾಣಸವಾಡಿ ವಾರ್ಡಿನ 70ಕ್ಕೂ ಅಧಿಕ ಗರ್ಭಿಣಿಯರಿಗೆ ಮಾಜಿ ಗೃಹ ಸಚಿವ, ಶಾಸಕ ಕೆ.ಜೆ.ಜಾರ್ಜ್, ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್. ರಕ್ಷ ರಾಮಯ್ಯ ಅವರು ಬಾಗಿನ ನೀಡಿ ಗೌರವಿಸಿದರು.

ದೊಡ್ಡ ಬಾಣಸವಾಡಿಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ತಾಯ್ತನದ ನಿರೀಕ್ಷೆಯಲ್ಲಿರುವ ಗರ್ಭೀಣಿಯರು ರೇಷ್ಮೆ ಸೀರೆಯುಟ್ಟಿದ್ದರು.

ಪ್ರತಿಯೊಬ್ಬರೂ ಹೂ ಮುಡಿದು ಭಾರತೀಯ ಸಂಪ್ರದಾಯದ ಪ್ರತೀಕವಾಗಿ ಕಂಗೊಳಿಸಿದರು. ನೆರೆ ಹೊರೆ, ಸ್ನೇಹಿತೆಯರ ಜೊತೆ ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಂಭ್ರಮಿಸಿದರು.

ಜವಾಹರ್ ಬಾಲಭವನದ ಅಧ್ಯಕ್ಷ ಜೆ. ಸಿರಿಲ್ ಪ್ರಭು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಘು ದೇವರಾಜ್ ಮತ್ತಿತರ ಯುವ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.

Sneha Gowda

Recent Posts

ಮತ್ತಷ್ಟು ಮೇಲಕ್ಕೆ ಎರುತ್ತೀರಿ : ಶ್ರೀನಿಧಿ ಶೆಟ್ಟಿಗೆ ದೈವದ ಅಭಯ

ಕೆಜಿಎಪ್ ಸಿನಿಮಾದ ನಾಯಕಿ ಶ್ರೀನಿಧಿ ಶೆಟ್ಟಿಯವರು ತನ್ನ ಕುಟುಂಬದ ದೈವಗಳಿಗೆ ಹೇಳಿದ್ದ ಹರಕೆಯ ನೇಮೋತ್ಸವವನ್ನು ನೆರವೇರಿಸಿದರು. ಮಂಗಳೂರಿನ ಹೊರವಲಯದ ಕಿನ್ನಿಗೋಳಿ…

15 mins ago

ಸಾಹಿತಿ, ಶಿಕ್ಷಕ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ ನಿಧನ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ಜಾನಪದ ವಿದ್ವಾಂಸ, ಸಾಹಿತಿ, ಶಿಕ್ಷಕ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ (79) ಮಂಗಳವಾರ…

34 mins ago

ಆಟವಾಡ್ತಿದ್ದ ಮಗು ಅಪಹರಣ : ಮೂರೇ ದಿನದಲ್ಲಿ ಪತ್ತೆ ಹಚ್ಚಿದ ಬೀದರ್​ ಪೊಲೀಸ್

ಅಪಹರಣಕ್ಕೊಳಗಾದ ಮಗವನ್ನ ಮೂರು ದಿನದಲ್ಲಿಯೇ ಬಬೀದರ ನಗರ ಪೊಲೀಸರು ಪತ್ತೆ ಹಚ್ಚಿದ್ದಾರೆ. ಮೇ 4 ರಂದು ಬೀದರ್​ನ ಓಲ್ಡ್ ಸಿಟಿಯ…

45 mins ago

ಕೊರೊನಾ ವ್ಯಾಕ್ಸಿನ್ ಹಿಂಪಡೆದ ಅಸ್ಟ್ರಾಜೆನೆಕಾ : ಹೆಚ್ಚಿದ ಆತಂಕ

ಕೊರೊನಾ ವ್ಯಾಕ್ಸಿನ್ ಮತ್ತು ಕೋವಶೀಲ್ಡ್‌ ಪಡೆದವರಲ್ಲಿ ಅಡ್ಡಪರಿಣಾಮಗಳು ಕಾಣಿಸಿಕೊಳ್ಳುತ್ತವೆ ಎಂಬ ಮಾತಿಗೆ ಧಂಗಾಗಿರುವ ಜನರಿಗೆ ಇದೀಗ ಕೊರೊನಾ ವ್ಯಾಕ್ಸಿನ್ ಹಿಂಪಡೆದ…

2 hours ago

ಇಂದು ರೇವಣ್ಣ ಜಾಮೀನು ಅರ್ಜಿ ವಿಚಾರಣೆ : ಬೇಲಾ? ಜೈಲಾ? ಇಂದೇ ನಿರ್ಣಾಯಕ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ…

2 hours ago

ಪ್ರತಿಷ್ಠಿತ ಕಂಪನಿಗಳ ನಕಲು ದಂಧೆ : ಆರೋಪಿಗಳು ಸಿಬಿಐ ವಶ

ದಿನ ನಿತ್ಯ ಜನರು ಬಳಸುವ ವಸ್ತುಗಳನ್ನೇ ಟಾರ್ಗೆಟ್ ಮಾಡಿಕೊಂಡ ಗ್ಯಾಂಗ್​ವೊಂದು ಕಳೆದ ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ಬೀಡು ಬಿಟ್ಟಿತ್ತು. ಜೊತೆಗೆ…

2 hours ago