ಬೆಂಗಳೂರು : ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾಧ್ಯಂತ ಜಾರಿಗೊಳಿಸಲಾಗಿದ್ದಂತ ನೈಟ್ ಕರ್ಪ್ಯೂವನ್ನು ರದ್ದುಪಡಿಸಲಾಗಿದೆ. ಇದಲ್ಲದೇ ಹೋಟೆಲ್, ರೆಸ್ಟೋರೆಂಟ್, ಪಬ್ ಗಳಲ್ಲಿನ ಶೇ.50ರ ಮಿತಿಯನ್ನು ವಾಪಾಸ್ ಪಡೆಯಲಾಗಿದೆ.
ಆದ್ರೇ ಸಿನಿಮಾ ಮಂದಿರಗಳಲ್ಲಿ ಶೇ.50ರ ಮಿತಿಯನ್ನು ಮುಂದುವರೆಸಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಇನ್ನೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸೋಮವಾರದಿಂದ ಬೆಂಗಳೂರಿನಲ್ಲಿ ಶಾಲೆಗಳು ಪುನರಾರಂಭಗೊಳ್ಳಲಿವೆ ಎಂದು ತಿಳಿಸಿದರು.
ಈ ಬಳಿಕ ಮಾತನಾಡಿದಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು, ಬೆಂಗಳೂರಿನಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಮತ್ತೆ ಶಾಲೆಗಳನ್ನು ಕೋವಿಡ್ ಕಡಿಮೆಯಾದ ಕಾರಣದಿಂದಾಗಿ ಸೋಮವಾರದಿಂದ ಎಂದಿನಂತೆ ಪುನರಾರಂಭವಾಗಲಿವೆ. ರಾಜ್ಯಾಧ್ಯಂತ ಶಾಲೆಗಳಿಗೆ ರಜೆ ಘೋಷಣೆ ಮಾಡುವಂತ ಅಧಿಕಾರವನ್ನು ಜಿಲ್ಲಾಡಳಿತ ತೆಗೆದುಕೊಳ್ಳಲಿದೆ ಎಂಬುದಾಗಿ ಹೇಳಿದರು.