ಬೆಂಗಳೂರು : ಹಿಜಾಬ್ಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಆಕ್ರೋಶ ಹೊರ ಹಾಕಿರುವ ಅಮೀರ್-ಇ-ಶರಿಯತ್ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಿದೆ.
ಬಲವಂತದ ಬಂದ್ ಆಗಲಿ, ಜಾಥಾ , ಮೆರವಣಿಗೆ ಆಗಲಿ ಮಾಡಬಾರದು ಎಂದು ಅವರು ಮನವಿ ಮಾಡಿದ್ದಾರೆ.
ಕೋರ್ಟ್ ತೀರ್ಪು ನಿರಾಶಾದಾಯಕವಾಗಿದ್ದು, ನಾಳೆ ಶಾಂತಿಯುತವಾಗಿ ಬಂದ್ ನಡೆಸಬೇಕು ಎಂದು ಅಮೀರ್-ಇ-ಶರಿಯತ್ ಮುಖಂಡ ಮೌಲಾನಾ ಸಗೀರ್ ಅಹಮದ್ ಕರೆ ನೀಡಿದ್ದಾರೆ.
”ಹಿಜಾಬ್ ಧರಿಸಿವುದು ಇಸ್ಲಾಂ ನ ಅತ್ಯಗತ್ಯ ಭಾಗವಲ್ಲ. ಸಮವಸ್ತ್ರ ಸಂಹಿತೆ ಕುರಿತಾಗಿ ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ, ಇದನ್ನು ಪ್ರಶ್ನಿಸುವಂತಿಲ್ಲ” ಎಂದು ಹೈಕೋರ್ಟ್ ತೀರ್ಪು ನೀಡಿತ್ತು.