News Karnataka Kannada
Friday, May 03 2024
ಬೆಂಗಳೂರು ನಗರ

ಹಿಜಾಬ್ ತೀರ್ಪು: ಇಂದು ರಾಜ್ಯದ ಹಲವು ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Karnataka High Court
Photo Credit : IANS

ಬೆಂಗಳೂರು : ಶಾಲೆಯಲ್ಲಿ ಸಮವಸ್ತ್ರ ವಿವಾದ ಕುರಿತು ಹೈಕೋರ್ಟ್ ಇಂದು ತೀರ್ಪು ನೀಡಲಿರುವ ಹಿನ್ನೆಲೆ ಇಂದು ರಾಜ್ಯದ ಹಲವು ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಂಗಳೂರು, ಉಡುಪಿ, ಶಿವಮೊಗ್ಗ, ಕಲಬುರಗಿ ಜಿಲ್ಲೆಯಲ್ಲಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಿಸಿದ್ದಾರೆ.

ಇಂದು ಕಲಬುರಗಿ ಜಿಲ್ಲೆಯಲ್ಲಿ ಕೂಡ 144 ಸೆಕ್ಷನ್ ಜಾರಿ ಮಾಡಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅದೇ ರೀತಿ ಶಿವಮೊಗ್ಗ ಜಿಲ್ಲೆಯಲ್ಲಿ ಕೂಡ `144 ಸೆಕ್ಷನ್ ಜಾರಿಗೊಳಿಸಿ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಿದ್ದಾರೆ. .ಶಾಲಾ ಕಾಲೇಜು ಆವರಣದ 200 ಮೀಟರ್ ವ್ಯಾಪ್ತಿಯಲ್ಲಿ ಶಾಲಾ ಕಾಲೇಜು ಸಿಬ್ಬಂದಿ ಆಯಾ ಕಾಲೇಜಿನ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಬೇರೆ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಗುಂಪುಗೂಡುವುದನ್ನು ನಿಷೇಧಿಸಲಾಗಿದೆ. ಉಡುಪಿ , ಮಂಗಳೂರು ಜಿಲ್ಲೆಯಲ್ಲಿ ಕೂಡ ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಶಾಲಾ ಕಾಲೇಜಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಹಿಜಾಬ್ ತೀರ್ಪಿನ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಿದ್ದಾರೆ.ಶಾಲಾ ಕಾಲೇಜು ಆವರಣದ 200 ಮೀಟರ್ ವ್ಯಾಪ್ತಿಯಲ್ಲಿ ಶಾಲಾ ಕಾಲೇಜು ಸಿಬ್ಬಂದಿ ಆಯಾ ಕಾಲೇಜಿನ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಬೇರೆ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಗುಂಪುಗೂಡುವುದನ್ನು ನಿಷೇಧಿಸಲಾಗಿದೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು