ಹಿಜಾಬ್ ತೀರ್ಪು ನೀಡಿದ್ದ ನ್ಯಾಯಾಧೀಶರಿಗೆ ಬೆದರಿಕೆ ಪ್ರಕರಣ: ಮತ್ತೊಬ್ಬ ಆರೋಪಿ ಅರೆಸ್ಟ್

ಬೆಂಗಳೂರು: ಹಿಜಾಬ್ ಇಸ್ಲಾಂ ಅತ್ಯಗತ್ಯ ಭಾಗವಲ್ಲ ಎಂಬುದಾಗಿ ತೀರ್ಪು ನೀಡಿದ್ದಂತ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ್ದಂತ ಪ್ರಕರಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ತಂಜಾವೂರಿನಲ್ಲಿ ನಿನ್ನೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಗೃಹ ಸಚಿವ ಅರಗ ಜ್ಞಾನೇಂದ್ರ, ಹಿಜಾಬ್ ತೀರ್ಪು ನೀಡಿದ್ದ ಜಡ್ಜ್ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಎರಡನೇ ಆರೋಪಿಯನ್ನ ಕರ್ನಾಟಕ ಪೊಲೀಸರು ಬಂಧನ ಮಾಡಿದ್ದಾರೆ.

ಬಂಧಿತ ಆರೋಪಿಯನ್ನ ಬೆಂಗಳೂರಿಗೆ ಕರೆದುಕೊಂಡು ಬರಲಾಗಿದೆ ಎಂದರು.

ಬಂಧಿತ ಆರೋಪಿಯನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಇದರಿಂದ ತನಿಖೆ ಗೆ ಸಹಕಾರಿಯಾಗಲಿದೆ. ಪ್ರಕರಣದ ಹಿಂದೆ ಯಾವ ಸಂಘಟನೆಗಳು ಇವೆ ಎನ್ನುವ ಬಗ್ಗೆಯೂ ತನಿಖೆ ನಡೆಯುತ್ತಿದೆ. ಒಟ್ಟಾರೆ ಇಬ್ಬರು ಆರೋಪಿಗಳ ಬಂಧನವಾಗಿದೆ ಎಂಬುದಾಗಿ ಹೇಳಿದರು.

ಇದೇ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಇಂದು 2ನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸುತ್ತಿರುವಂತ ಯೋಗಿ ಅಧಿತ್ಯನಾಥ್ ಅವರಿಗೆ ಶುಭಾಷಯವನ್ನು ಕೋರಿದರು. ಅಲ್ಲದೇ ಉತ್ತರ ಆಡಳಿತ ಕೊಡಲಿ ಎಂದು ಹೇಳಿದರು.

Swathi MG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

5 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

5 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

5 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

5 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

7 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

7 hours ago