ಬೆಂಗಳೂರು ನಗರ

ಹಿಜಾಬ್‌ ಧರಿಸಲು ಅನುಮತಿ ನೀಡುವಂತೆ ಒತ್ತಾಯಿಸಿ ನಾಳೆ ಕರ್ನಾಟಕ ಬಂದ್‌

ಬೆಂಗಳೂರು : ಶಾಲಾ- ಕಾಲೇಜಿನಲ್ಲಿ ಹಿಜಾಬ್  ಧರಿಸುವಂತಿಲ್ಲ, ಸರ್ಕಾರದ ವಸ್ತ್ರ ಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ ಅಂತ ನಿನ್ನೆ (ಮಾರ್ಚ್​15) ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಆದರೆ ಕೋರ್ಟ್ ತೀರ್ಪಿಗೆ ಬೇಸರ ವ್ಯಕ್ತಪಡಿಸಿರುವ​ ಮುಸ್ಲಿಂ ಸಮುದಾಯ ಮುಖಂಡರು ನಾಳೆ ಕರ್ನಾಟಕ ಬಂದ್​ಗೆ ಕರೆ ನೀಡಿದ್ದಾರೆ.

ಮುಸ್ಲಿಂ ಮುಖಂಡರು ಸ್ವಯಂಪ್ರೇರಿತ ಬಂದ್​ಗೆ ಘೋಷಣೆ ಮಾಡಿದ್ದಾರೆ. ನಾಳೆ ( ಮಾರ್ಚ್​ 17) ಇಡೀ ರಾಜ್ಯಾದ್ಯಂತ ವ್ಯಾಪಾರ ವಹಿವಾಟು ಬಂದ್ ಮಾಡಲು ಸೂಚನೆ ನೀಡಿದ್ದಾರೆ.

ನಾಳೆ ಮುಸ್ಲಿಂ ಸಮುದಾಯದವರು ನಡೆಸುತ್ತಿರುವ ವ್ಯಾಪಾರ ವಹಿವಾಟು ನಡೆಸದೆ ಬಂದ್ ಮಾಡಲು ಧರ್ಮಗುರುಗಳ ಸಭೆಯಲ್ಲಿ ಮುಖಂಡ ಸಗೀರ್ ಅಹ್ಮದ್ ಘೋಷಣೆ ಮಾಡಿದ್ದಾರೆ. ಯಾರ ಮೇಲೂ ಒತ್ತಾಯ ಹೇರಿ ಬಂದ್‌ ನಡೆಸದಿರುವಂತೆ ಒತ್ತಾಯಿಸಿದ್ದಾರೆ.

ಹಿಜಾಬ್ ವಿಚಾರವಾಗಿ ನಿನ್ನೆ ಸಭೆ ನಡೆಸಿದ್ದರು. ಅಮಿರ್ ಎ ಷರಿಯಾತ್ ಅವರ ನಿವಾಸದಲ್ಲಿ ಸಭೆ ನಡೆದಿತ್ತು. ಸಭೆಯಲ್ಲಿ ಸಲಿಂ ಅಹ್ಮದ್, ಜಮೀರ್ ಅಹ್ಮದ್ ಖಾನ್, ಯು.ಟಿ.ಖಾದರ್, ಎನ್.ಎ.ಹ್ಯಾರಿಸ್, ನಜೀರ್ ಅಹ್ಮದ್, ರೆಹಮಾನ್ ಖಾನ್, ಖನೀಜ್ ಫಾತಿಮಾ ಸೇರಿದಂತೆ ಇತರರು ಭಾಗಿಯಾಗಿದ್ದರು.

ವಿದ್ಯಾರ್ಥಿನಿಯರ ಹೇಳಿಕೆಗೆ ಆಕ್ಷೇಪ:
ಹೈಕೋರ್ಟ್ ತೀರ್ಪಿನ ಬಳಿಕ ವಿದ್ಯಾರ್ಥಿನಿಯರು ನೀಡಿದ್ದ ಹೇಳಿಕೆಗೆ ಧರ್ಮಗುರುಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅವರ ವರ್ತನೆ ಸರಿ ಅಲ್ಲ, ಅವರಿಗೆ ಮಾರ್ಗದರ್ಶನ ಅಗತ್ಯವಿದೆ. ಸುದ್ದಿಗೋಷ್ಠಿಗೆ ಉತ್ತೇಜಿಸಿದ್ದು ಸರಿ ಅಲ್ಲ. ಹೈಕೋರ್ಟ್ ತೀರ್ಪಿನಿಂದ ಆತಂಕ ಪಡುವ ಅಗತ್ಯವಿಲ್ಲ. ಸಮವಸ್ತ್ರ ಇರುವಲ್ಲಷ್ಟೇ ಆದೇಶ ಪಾಲನೆ ಮಾಡಲು ಹೇಳಿದೆ. ಸುಪ್ರಿಂಕೋರ್ಟ್‌ಗೆ ಹೋಗಲು ಸಹ ನಮಗೆ ಅವಕಾಶ ಇದೆ. ಈಗಾಗಲೇ ಕಪಿಲ್ ಸಿಬಲ್ ಜೊತೆ ಮಾತನಾಡಲಾಗಿದೆ. ಅನಗತ್ಯವಾಗಿ ಸಮಾಜದಲ್ಲಿ ಗೊಂದಲ ಸೃಷ್ಟಿಯಾಗುವುದು ಬೇಡ ಅಂತ ಎಲ್ಲ ನಾಯಕರಿಗೆ ನಿನ್ನೆ ಅಮಿರ್ ಎ ಷರಿಯಾತ್ ಸೂಚನೆ ನೀಡಿದ್ದಾರೆ.

Gayathri SG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

8 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

8 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

8 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

9 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

9 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

9 hours ago