ಹಿಜಾಬ್‌ ಪ್ರಕರಣ: ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಶೀಘ್ರ ಸುಪ್ರೀಂಗೆ ಮೇಲ್ಮನವಿ

ರಾಜ್ಯಾದ್ಯಂತ ತೀವ್ರ ಚರ್ಚೆಗೆ ಚರ್ಚೆಗೆ ಕಾರಣವಾಗಿದ್ದ ಹಿಜಾಬ್ ವಿವಾದದ ಕುರಿತು ಹೈಕೋರ್ಟ್‌ ತೀರ್ಪು ಹೊರಬಿದ್ದಿದೆ. ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್​ರಿದ್ದ ಪೂರ್ಣ ಪೀಠವು ತನ್ನ ತೀರ್ಪು ಪ್ರಕಟಿಸಿದ್ದು, ಸರ್ಕಾರ ಹೊರಡಿಸಿದ್ದ ಸಮವಸ್ತ್ರದ ಆದೇಶವನ್ನು ಎತ್ತಿಹಿಡಿದಿದೆ.

ಸಮವಸ್ತ್ರ ನಿಗದಿಪಡಿಸುವ ಅಧಿಕಾರ ಶಾಲೆಗಳಿಗಿದೆ, ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ, ಹಿಜಾಬ್‌ ಸೇರಿದಂತೆ ಯಾವುದೇ ಧಾರ್ಮಿಕ ವಸ್ತ್ರಗಳನ್ನು ಶಾಲಾಕಾಲೇಜುಗಳಲ್ಲಿ ಧರಿಸಬಾರದು ಎಂಬುದನ್ನು ಸ್ಪಷ್ಟಪಡಿಸಿದೆ.

ಈ ನಡುವೆ ಹೈಕೋರ್ಟ್‌ ತೀರ್ಪಿನ ಕುರಿತು ಹಿಜಾಬ್‌ ಪರ ಅರ್ಜಿದಾರರ ವಕೀಲ ಶತಭಿಷ ಶಿವಣ್ಣ ಪ್ರತಿಕ್ರಿಯೆ ನೀಡಿದ್ದು, ಹೈಕೋರ್ಟ್ ತೀರ್ಪು ಪ್ರಶ್ನಿಸಿ ಶೀಘ್ರದಲ್ಲೇ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಅರ್ಜಿ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ.

ಹೈಕೋರ್ಟ್ ತೀರ್ಪಿನ ಪ್ರತಿ ಲಭ್ಯವಾದ ಬಳಿಕ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಅರ್ಜಿದಾರರ ಪರ ವಕೀಲ ಹೇಳಿಕೆ ನೀಡಿದ್ದಾರೆ.

Sneha Gowda

Recent Posts

ಜಾತಿಗಿಂತ‌ ದೇಶದ ಹಿತ‌ ಮುಖ್ಯ: ವಿಜಯ್ ಜೋಶಿ ಮನವಿ

ಕಳೆದ 25 ವರ್ಷಗಳಿಂದ ವಿಜಯಪುರ ಜಿಲ್ಲೆಯ ಪ್ರಬುದ್ಧ ಮತದಾರರು ಯಾವುದೇ ಜಾತಿ, ಮತ, ಪಂಥ ನೋಡದೇ ಜಾತಿಗಿಂತ ದೇಶದ ಹಿತವೇ…

59 mins ago

ಪ್ರತಿ ಬೂತ್ ನಲ್ಲಿ ಬಿಜೆಪಿ ಪರ ಅಲೆ, ಕಾರ್ಯಕರ್ತರಲ್ಲಿ ಅತ್ಯುತ್ಸಾಹ : ಪ್ರಕಾಶ ಅಕ್ಕಲಕೋಟ.

ವಿಜಯಪುರ ಲೋಕಸಭಾ ಕ್ಷೇತ್ರದ ಪ್ರತಿಯೊಂದು ಬೂತ್ ಗಳಲ್ಲಿ ಬಿಜೆಪಿ‌ ಪರ ಉತ್ತಮ ವಾತಾವರಣ ಸೃಷ್ಟಿಯಾಗಿದ್ದು, ಬಿಜೆಪಿ ಪರ‌ ಅಲೆ‌ ಇದೆ…

1 hour ago

ಮೃಣಾಲ್‌ ಹೆಬ್ಬಾಳ್ಕರ್ ಪರ ಹಣ ಹಂಚಿಕೆ ಆರೋಪ: ಐವರ ಬಂಧನ

ಬೆಳಗಾವಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಪರ ಹಣ ಹಂಚಿಕೆ ಆರೋಪದಲ್ಲಿ ಹಣದ ಸಮೇತ ನಾಲ್ವರು ಸಿಕ್ಕಿಬಿದ್ದ ಘಟನೆ…

1 hour ago

ಬಿಜೆಪಿ ಸುಳ್ಳು ಇನ್ನು ನಡೆಯಲ್ಲ: ಲಕ್ಷ್ಮಣ ಸವದಿ ವಾಗ್ದಾಳಿ

ಮೋದಿ ಮತ್ತವರ ಬಳಗ ಮತ್ತು ಬಿಜೆಪಿಯವರ ಸುಳ್ಳುಗಳನ್ನು ಜನ ಅರಿತಿದ್ದು, ಈ ಸಲ ಸರಿಯಾಗಿ ಪಾಠ ಕಲಿಸಲಿದ್ದಾರೆ ಎಂದು ಮಾಜಿ…

2 hours ago

ಗ್ಯಾರಂಟಿಗಳು ಕಾಂಗ್ರೆಸ್ ಹಾಗು ಖಂಡ್ರೆ ಗೆಲುವಿಗೆ ಶ್ರೀರಕ್ಷೆ

ಜನಸಾಮಾನ್ಯರಿಗೆ ಆಸರೆಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳು ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಗರ್…

2 hours ago

ಅಶ್ಲೀಲ ವಿಡಿಯೋ ಪ್ರಕರಣ: ಹೆಚ್​ಡಿ ರೇವಣ್ಣ ಬಂಧನ

ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣರನ್ನು ವಿಶೇಷ ತನಿಖಾ ದಳದ  ಅಧಿಕಾರಿಗಳು…

2 hours ago