News Karnataka Kannada
Monday, April 29 2024
ಬೆಂಗಳೂರು ನಗರ

ಹಿಜಾಬ್ ವಿವಾದ ಮುಂದುವರೆಸದೆ ಇಲ್ಲಿಗೆ ಪೂರ್ಣ ವಿರಾಮ ಹಾಕಿ; ಬಿ.ಎಸ್.ಯಡಿಯೂರಪ್ಪ

Shimoga: Priyank Kharge has committed an unpardonable crime without an apology, says BS Yediyurappa Yediyurappa
Photo Credit :

ಬೆಂಗಳೂರು,ಮಾ.15 : ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವಿಕೆ ಕುರಿತಂತೆ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರತಿಯೊಬ್ಬರು ಗೌರವಿಸಿ ಈ ವಿಷಯವನ್ನು ಮುಂದುವರೆಸದೆ ಇಲ್ಲಿಗೆ ಪೂರ್ಣ ವಿರಾಮ ಹಾಕಬೇಕೆಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಕ್ಕಿಂತ ಸಂವಿಧಾನ ದೊಡ್ಡದು ಎಂದು ಹೈಕೋರ್ಟ್‍ನ ತ್ರಿಸದಸ್ಯ ಪೀಠ ನೀಡಿರುವ ಐತಿಹಾಸಿಕ ತೀರ್ಪನ್ನು ನಾವೆಲ್ಲರೂ ಗೌರವಿಸೋಣ. ಇದು ಯಾರ ಪರ, ವಿರೋಧದ ತೀರ್ಪಲ್ಲ. ನ್ಯಾಯಾಲಯ ನೀಡಿರುವ ತೀರ್ಪನ್ನು ನಾವೆಲ್ಲರೂ ಗೌರವಿಸಿ ಎಲ್ಲರೂ ಸೌಹಾರ್ದಯುತವಾಗಿ ಬದುಕೋಣ ಎಂದು ಮನವಿ ಮಾಡಿದರು.

ಈಗಾಗಲೇ ಪರೀಕ್ಷೆಗಳು ಆರಂಭವಾಗುತ್ತಿವೆ. ಕೋವಿಡ್ ಕಾರಣದಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗಿದೆ. ಪುನಃ ಇದನ್ನು ಮುಂದುವರೆಸುವುದರಲ್ಲಿ ಅರ್ಥವಿಲ್ಲ. ನಾವೆಲ್ಲರೂ ಒಂದೇ ತಾಯಿಯ ಮಕ್ಕಳಂತೆ ಬದುಕೋಣ. ಮಕ್ಕಳಲ್ಲಿ ನಾವು ಸೌಹಾರ್ದತೆ, ಭಾತೃತ್ವ ಬೆಳೆಸೋಣ. ಹೆಚ್ಚು ವಿವಾದ ಬೆಳೆಸುವುದರಲ್ಲಿ ಅರ್ಥವಿಲ್ಲ ಎಂದು ಅಭಿಪ್ರಾಯಪಟ್ಟರು.

ಪ್ರತಿಯೊಬ್ಬರು ನ್ಯಾಯಾಲಯದ ಆದೇಶಕ್ಕೆ ತಲೆ ಬಾಗಬೇಕು. ಅನಗತ್ಯವಾಗಿ ಗೊಂದಲ ಸೃಷ್ಟಿಸುವ ಕೆಲಸ ಯಾರಿಂದಲೂ ಆಗಬಾರದು ಎಂದು ಯಡಿಯೂರಪ್ಪ ಕಿವಿಮಾತು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 2 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು