ಹಿಜಾಬ್ ವಿವಾದ ​: ​ಸಮವಸ್ತ್ರ ಎತ್ತಿಹಿಡಿದು ಐತಿಹಾಸಿಕ ತೀರ್ಪು ಪ್ರಕಟಿಸಿದ ಹೈಕೋರ್ಟ್​

ಬೆಂಗಳೂರು : ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್​ ನಿರ್ಬಂಧ ಪ್ರಕರಣ ಸಂಬಂಧ ಹೈಕೋರ್ಟ್​ ಮಹತ್ವದ ತೀರ್ಪು ನೀಡಿದೆ. ಹಿಜಾಬ್ ಧರಿಸುವುದು ಇಸ್ಲಾಂ ಅಗತ್ಯ ಧಾರ್ಮಿಕ ಆಚರಣೆಯಲ್ಲ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಎಲ್ಲ ಅರ್ಜಿಗಳನ್ನೂ ವಜಾ ಮಾಡಲಾಗಿದೆ.

ಶಾಲಾ-ಕಾಲೇಜುಗಲ್ಲಿ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಬೇಕು. ಸರ್ಕಾರದ ವಸ್ತ್ರ ಸಂಹಿತೆ ನೀತಿಯನ್ನು ಪ್ರಶ್ನಿಸುವಂತಿಲ್ಲ ಎಂದು ಹೈಕೋರ್ಟ್ ಪೂರ್ಣ ಪೀಠ ಮಹತ್ವದ ತೀರ್ಪು ಪ್ರಕಟಿಸಿದೆ.

ಕಾಲೇಜುಗಳಲ್ಲಿ ಹಿಜಾಬ್​ ನಿರ್ಬಂಧಿಸಿರುವ ಕ್ರಮ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ವಸ್ತ್ರಸಂಹಿತೆ ಜಾರಿ ಸಂಬಂಧ ಕಳೆದ ಫೆ.5ರಂದು ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ 10ಕ್ಕೂ ಅಧಿಕ ಅರ್ಜಿಗಳು ಹಾಗೂ ಮಧ್ಯಂತರ ಅರ್ಜಿಗಳು ಸಲ್ಲಿಕೆಯಾಗಿದ್ದವು. ಸತತ 11 ದಿನ ವಾದ-ಪ್ರತಿವಾದ ಆಲಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್​ ಅವಸ್ಥಿ ಹಾಗೂ ನ್ಯಾಯಮೂರ್ತಿಗಳಾದ ಕೃಷ್ಣ ಎಸ್​. ದೀಕ್ಷಿತ್​ ಮತ್ತು ಖಾಜಿ ಜೈಬುನ್ನಿಸಾ ಮೊಹಿದ್ದೀನ್​ ಅವರಿದ್ದ ಪೂರ್ಣಪೀಠ ಫೆ.25ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸುವ ಮೂಲಕ ಹಿಜಾಬ್​ ವಿವಾದಕ್ಕೆ ತಾರ್ಕಿಕ ಅಂತ್ಯ ಹಾಡಿದೆ.

Gayathri SG

Recent Posts

ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನ ಪಡೆದುಕೊಂಡ ಯಶ್‌ ಹೀರೋಯಿನ್‌!

ಸಿನಿಮಾ ರಂಗದಲ್ಲಿ ಮತ್ತೊಂದು ವಿಚ್ಛೇದನ ಖಚಿತವಾಗಿದೆ. ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.

28 mins ago

ಐದು ಮಂದಿಗೆ ವೆಸ್ಟ್ ನೈಲ್ ಜ್ವರ ಪತ್ತೆ; ಅಲರ್ಟ್ ಆದ ಸರಕಾರ

ವೆಸ್ಟ್ ನೈಲ್ ಫೀವರ್ ನ ಐದು ಪ್ರಕರಣಗಳು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.

39 mins ago

ಆಂಬುಲೆನ್ಸ್ ನೌಕರರ ಮುಷ್ಕರ ತಾತ್ಕಾಲಿಕ ಮುಂದೂಡಿಕೆ

ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.

46 mins ago

ಬೆಂಗಳೂರಿನಲ್ಲಿ ರೌಡಿಶೀಟರ್​ ಕಾರ್ತಿಕೇಯನ್ ಬರ್ಬರ ಹತ್ಯೆ

ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್​ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.

1 hour ago

ಪಕ್ಷದ ಬ್ಯಾಡ್ಜ್ ಧರಿಸಿ ಮತದಾನ; ಖೂಬಾ ವಿರುದ್ಧ ಪ್ರಕರಣ ದಾಖಲು

ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ…

2 hours ago

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ

ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.

2 hours ago