News Karnataka Kannada
Friday, May 03 2024
ಬೆಂಗಳೂರು ನಗರ

ಹಿಜಾಬ್ ವಿವಾದ: ಸಿಜೆ ನೇತೃತ್ವದಲ್ಲಿಇಂದು ಮಧ್ಯಾಹ್ನ ವಿಚಾರಣೆ

Rs 50 lakh If you don't, you will be killed by dubai gang: HC judge
Photo Credit :

ಹಿಜಾಬ್ ನಿರ್ಬಂಧಿಸಿರುವ ಶಿಕ್ಷಣ ಸಂಸ್ಥೆಗಳ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಗೆ ಹೈಕೋರ್ಟ್ ವಿಶೇಷ ಪೀಠ ರಚನೆ ಮಾಡಿದ್ದು, ಇಂದು ವಿಚಾರಣೆ ನಡೆಯಲಿದೆ.

ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ರಚಿಸಲಾಗಿದೆ.

ನಿನ್ನೆಯೂ ವಿಚಾರಣೆ ನಡೆದಿದ್ದು, ಹಿಜಾಬ್ ಧರಿಸುವುದು ಮೂಲಭೂತ ಹಕ್ಕಾಗಿದೆಯೇ ಮತ್ತು ಹಿಜಾಬ್ ಧರಿಸುವುದು ಕಡ್ಡಾಯ ಆಚರಣೆಯೇ ಎಂಬೆಲ್ಲ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಬೇಕಿದೆ ಆದ್ದರಿಂದ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡುವ ಅವಶ್ಯ ಇದೆ ಎಂದು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅಭಿಪ್ರಾಯಪಟ್ಟಿದ್ದರು.

ವಾದ ವಿವಾದ ಆಲಿಸಿದ ನಂತರ ಪ್ರಕರಣದ ತೀವ್ರತೆ ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅರ್ಜಿಗಳ ವಿಚಾರಣೆಗೆ ತ್ರಿಸದಸ್ಯ ಪೀಠ ರಚಿಸಿದ್ದಾರೆ. ಇಂದು ಮಧ್ಯಾಹ್ನ ವಿಚಾರಣೆ ನಡೆಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು