News Karnataka Kannada
Saturday, May 04 2024
ಬೆಂಗಳೂರು ನಗರ

ಹಿರಿಯ ನಟ ರಾಜೇಶ್ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

Rajesh.
Photo Credit :

ಬೆಂಗಳೂರು: ಹಿರಿಯ ನಟ ರಾಜೇಶ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

“ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಅವರು ಇಂದು ನಮ್ಮನ್ನು ಅಗಲಿದ್ದಾರೆ. ಅವರು ಅತ್ಯಂತ ಪ್ರೌಢಿಮೆಯ ಅಭಿನಯವನ್ನು ಪ್ರದರ್ಶಿಸುತ್ತಿದ್ದ ಕಲಾವಿದರಾಗಿದ್ದರು. ಅವರ ಸಿನೆಮಾಗಳು ಮನದಾಳದಲ್ಲಿದೆ. ಯಾವುದೇ ಪಾತ್ರವನ್ನು ನೀಡಿದರೂ ಸುಲಲಿತವಾಗಿ ಅಭಿನಯಿಸುವ ಸಾಮರ್ಥ್ಯ ಅವರಲ್ಲಿತ್ತು. ಕಲಾಸೇವೆಯನ್ನು ಅವರು ಅತ್ಯಂತ ಪ್ರಾಮಾಣಿಕತೆಯಿಂದ ಮಾಡಿದ್ದಾರೆ.

ತಾನು ದೊಡ್ಡ ನಟನೆಂಬ ಆಡಂಬರವಿಲ್ಲದೇ ಬದುಕಿದ ಅತ್ಯಂತ ಸರಳಜೀವಿ. ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಕುಟುಂಬದವರಿಗೆ ಭಗವಂತ ನೀಡಲಿ ಹಾಗೂ ಅವರ ಆತ್ಮಕ್ಕೆ ಶಾಂತಿ ದೊರೆಯಲಿ” ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು