ಬೆಂಗಳೂರು ನಗರ

ಹುಡುಗರನ್ನು ಬಂಧಿಸುವುದಲ್ಲ, ಅಕ್ರಮದ ಅಂಗಡಿ ತೆರೆದ ರಾಜಕಾರಣಿಗಳನ್ನು ಬಂಧಿಸಿ: ಡಿ.ಕೆ.ಶಿ

ಕನಕಪುರ: ‘ಪಿಎಸ್ಐ ಅಕ್ರಮ ಪ್ರಕರಣದಲ್ಲಿ ಹಣ್ಣು ತಿಂದವ ತಪ್ಪಿಸಿಕೊಂಡ, ಸಿಪ್ಪೆ ತಿಂದವ ಸಿಕ್ಕಿಬಿದ್ದ ಎಂಬಂತೆ ಆಗಬಾರದು. ಪೊಲೀಸರು ಕೇವಲ ಅಭ್ಯರ್ಥಿಗಳನ್ನು ಬಂಧಿಸುವುದಲ್ಲ, ಈ ಅಕ್ರಮದ ಅಂಗಡಿ ತೆರೆದ ರಾಜಕಾರಣಿಗಳನ್ನು ಬಂಧಿಸಬೇಕು ‘ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿ ದರ್ಶನ್ ಗೌಡ ಅವರನ್ನು ತನಿಖಾಧಿಕಾರಿಗಳು ಬಂಧಿಸಿ ವಿಚಾರಣೆಗೆ ಕರೆದೊಯ್ದ ವಿಚಾರವಾಗಿ ಮಾಧ್ಯಮಗಳು ಸೋಮವಾರ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು, ‘ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಕೇವಲ ಅಭ್ಯರ್ಥಿಗಳನ್ನು ಕರೆದುಕೊಂಡು ಹೋಗಿ ವಿಚಾರಣೆ ಮಾಡಿದರೆ ಸಾಲದು. ಈ ಅಕ್ರಮಕ್ಕೆ ಪ್ರೋತ್ಸಾಹ ಕೊಟ್ಟ ಪ್ರಭಾವಿ ವ್ಯಕ್ತಿಗಳು, ಅಕ್ರಮವಾಗಿ ಪರೀಕ್ಷೆ ಬರೆಸಿದವರು, ಇದರ ಹಿಂದೆ ಇರುವ ರಾಜಕಾರಣಿಗಳು, ಪೊಲೀಸ್ ಅಧಿಕಾರಿಗಳು ಯಾರು ಎಂಬುದನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು.

ಕೇವಲ ಒಬ್ಬರನ್ನು ಆಯ್ಕೆ ಮಾಡಲು ಪ್ರತ್ಯೇಕ ಆದೇಶ ಹೊರಡಿಸಿರುವುದು ಸೇರಿದಂತೆ ಈ ಹಗರಣದಲ್ಲಿ ಎನೆಲ್ಲಾ ನಡೆದಿದೆ, ನಮ್ಮ ಕ್ಷೇತ್ರದಲ್ಲಿ ಎಷ್ಟು ಜನ ಪಾಸಾಗಿದ್ದಾರೆ, ಯಾರು ಕೆಲವು ಅಭ್ಯರ್ಥಿಗಳ ವಿಚಾರಣೆ ಮಾಡದಂತೆ ಕರೆ ಮಾಡಿ ಒತ್ತಡ ಹಾಕಿದ್ದಾರೆ ಎಂಬುದು ನಮಗೆ ತಿಳಿದಿದೆ.

ಈ ಪ್ರಕರಣವನ್ನು ಮುಚ್ಚಿಹಾಕಲು ಏನು ಬೇಕೋ ಅದನ್ನು ಮಾಡುತ್ತಿದ್ದಾರೆ. ಇವರು ಏನು ಮಾಡುತ್ತಾರೆ ಕಾದು ನೋಡೋಣ. ತನಿಖಾ ವರದಿ ಬರುವ ಮುನ್ನವೇ ಪರೀಕ್ಷೆ ರದ್ದು ಮಾಡಿದ್ದಾರೆ. ಆ ಮೂಲಕ ಅಭ್ಯರ್ಥಿಗಳು ನ್ಯಾಯಾಲಯಕ್ಕೆ ಹೋಗಲಿ ಎಂದು ಈ ರೀತಿ ಮಾಡಿದ್ದಾರೆ. ನಮ್ಮ ಹೋರಾಟ ಕೇವಲ ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಮಾತ್ರ ಸೀಮಿತವಲ್ಲ, ಎಲ್ಲಾ ಇಲಾಖೆಗಳಲ್ಲಿನ ನೇಮಕಾತಿ ಅಕ್ರಮ ಹಾಗೂ ನಿರುದ್ಯೋಗ ವಿಚಾರಕ್ಕೆ ಸಂಬಂಧಿಸಿದ್ದು. ಇಡೀ ದೇಶದಲ್ಲಿ ಕರ್ನಾಟಕದಲ್ಲಿರುವಷ್ಟು ದೊಡ್ಡ ಭ್ರಷ್ಟಾಚಾರದ ಕೂಪ ಬೇರೆ ಯಾವುದೇ ರಾಜ್ಯದಲ್ಲಿಲ್ಲ ಎಂದರು.

Sneha Gowda

Recent Posts

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

8 mins ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

57 mins ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

1 hour ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

1 hour ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

2 hours ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

2 hours ago