ಹೂ ಮಾರುಕಟ್ಟೆ ನಿರ್ಮಾಣ: ಸರ್ಕಾರದಿಂದ 10 ಎಕರೆ ಜಾಗ ಮಂಜೂರು

ಬೆಂಗಳೂರು : ರಾಜ್ಯದ ರೈತರು ಬೆಳೆದ ಹೂಗಳನ್ನು ಮಾರಾಟ ಮಾಡಲು ಬೆಂಗಳೂರು ನಗರದಲ್ಲಿ ವ್ಯವಸ್ಥಿತವಾದ ಮಾರುಕಟ್ಟೆ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.
ಹೆಬ್ಬಾಳ ಪಶುವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಸೇರಿದ ಜಾಗದಲ್ಲಿ 10 ಏಕರೆ ಜಾಗವನ್ನು ತೋಟಗಾರಿಕಾ ಇಲಾಖೆಗೆ ಗುತ್ತಿಗೆ ಆಧಾರದ ಮೇಲೆ ಹಸ್ತಾಂತರಿಸಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಹಲವಾರು ವರ್ಷಗಳಿಂದ ರಾಜ್ಯದ ರೈತರು ತಾವು ಬೆಳೆದ ಹೂಗಳನ್ನು ಮಾರಾಟ ಮಾಡಲು ಸರಿಯಾದ ಮಾರುಕಟ್ಟೆಯ ವ್ಯವಸ್ಥೆ ಇರಲಿಲ್ಲ. ಕೆ. ಆರ್‌ ಮಾರುಕಟ್ಟೆಯಲ್ಲಿ ಸರಿಯಾದ ಜಾಗವಿಲ್ಲದೆ ಇಕ್ಕಟ್ಟಿನಲ್ಲಿ ಕಾರ್ಯನಿರ್ವಹಿಸಬೇಕಾಗಿತ್ತು. ಈ ಹಿನ್ನಲೆಯಲ್ಲಿ ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿನಲ್ಲಿ ಲಭ್ಯವಿರುವ ಜಾಗವನ್ನು ನೀಡುವಂತೆ ಈ ಹಿಂದೆ ಪತ್ರ ಬರೆದು ರಾಜ್ಯ ಸರಕಾರಕ್ಕೆ ಒತ್ತಾಯಿಸಿತ್ತು.
ಅದರ ಫಲಶೃತಿಯಾಗಿ ತೋಟಗಾರಿಕಾ ಇಲಾಖೆಗೆ 10 ಎಕರೆಗಳ ಜಾಗವನ್ನು ಗುತ್ತಿಗೆ ಆಧಾರದ ಮೇಲೆ ಹಸ್ತಾಂತರಿಸಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಇದು ಬಹಳ ಸ್ವಾಗತಾರ್ಹ ವಿಷಯವಾಗಿದೆ ಎಂದು ದಕ್ಷಿಣ ಭಾರತ ಪುಷ್ಪ ಬೆಳೆಗಾರರ ಸಂಘದ ಅಧ್ಯಕ್ಷ ಟಿ ಎಂ ಅರವಿಂದ್‌ ಹರ್ಷ ವ್ಯಕ್ತಪಡಿಸಿದ್ದಾರೆ.

Indresh KC

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

1 hour ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

2 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

2 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

2 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

3 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

3 hours ago