ತಮಿಳುನಾಡಿನ ಕುನೂರಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲಾಗಿದೆ.
ವರುಣ್ ಸಿಂಗ್ ಅವರಿದ್ದ ಏರ್ ಆಂಬುಲೆನ್ಸ್ ಸೂಲೂರು ವಾಯುನೆಲೆಯಿಂದ ಗುರುವಾರ ಸಂಜೆ ಬೆಂಗಳೂರು ತಲುಪಿದ್ದು, ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದ ಏರ್ ಆಂಬುಲೆನ್ಸ್ನಿಂದ ವರುಣ್ ಸಿಂಗ್ ಅವರನ್ನು ಓಲ್ಡ್ ಏರ್ಪೋರ್ಟ್ ರಸ್ತೆಯಲ್ಲಿರುವ ಕಮಾಂಡೊ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಕಮಾಂಡೋ ಆಸ್ಪತ್ರೆ ಬಳಿ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ.