ಬೆಂಗಳೂರು,ಜ.24 : ಯಾರಾದರೂ ಹೆಣ್ಣು ಭ್ರೂಣ ಪತ್ತೆ ಮಾಡುವುದು ಬೆಳಕಿಗೆ ಬಂದರೆ ಅಂತಹ ಚಿಕಿತ್ಸಾ ಕೇಂದ್ರ ಗಳ ಲೈಸೆನ್ಸ್ ಗಳನ್ನು ಮುಲಾ ಜಿಲ್ಲದೆ ರದ್ದುಪಡಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್ ಎಚ್ಚರಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಣ್ಣು ಭ್ರೂಣ ಹತ್ಯೆ ಪತ್ತೆ ಮಾಡುವುದನ್ನು ನಿಷೇಧ ಮಾಡಲಾಗಿದೆ. ಇದು ಕಾನೂನು ಪ್ರಕಾರ ಶಿಕ್ಷಾರ್ಹ ಅಪರಾಧ. ಹಾಗೊಂದು ವೇಳೆ ಯಾರಾದರೂ ಪತ್ತೆ ಮಾಡುವುದು ಕಂಡುಬಂದರೆ ಅಂಥವರ ಲೈಸೆನ್ಸ್ಗಳನ್ನು ರದ್ದುಪಡಿಸುತ್ತೇವೆ ಎಂದು ಹೇಳಿದರು.
ಕೆಲವು ರೇಡಿಯೋಲಾಜಿಸ್ಟ್ ತಾಂತ್ರಿಕ ಸಿಬ್ಬಂದಿ ಮತ್ತು ವೈದ್ಯರು ಇಂತಹ ಪ್ರಕರಣಗಳಲ್ಲಿ ಶಾಮೀಲಾಗುತ್ತಾರೆ ಎಂಬ ಆರೋಪ ಕೇಳಿಬಂದಿದೆ ಅಂಥವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ತೆಗೆದುಕೊಳ್ಳಲು ಸರ್ಕಾರ ಹಿಂದೆಮುಂದೆ ನೋಡುವುದಿಲ್ಲ ಎಂದು ಗುಡುಗಿದರು.
ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳಿವೆ. ಗಂಡು, ಹೆಣ್ಣು ಎಂಬ ಬೇಧವಿಲ್ಲದೆ ಎಲ್ಲರೂ ಸಮಾನತೆಯಿಂದ ಬದುಕಬೇಕು. ಇದೇ ಕಾರಣಕ್ಕಾಗಿ ಭ್ರೂಣ ಪತ್ತೆ ಮಾಡುವುದನ್ನು ಸರ್ಕಾರ ನಿಷೇಧ ಮಾಡಿದೆ. ಇದಕ್ಕೆ ಪ್ರತಿಯೊಬ್ಬರು ಮನವಿ ಮಾಡಿದರು.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ನಾಳೆ ಮೇ ಮೂರರಂದು ದಾವಣಗೆರೆಗೆ ಆಗಮಿಸುತ್ತಿದ್ದಾರೆ.
ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಅಂದಿನ ಕಾರ್ಮಿಕ ವರ್ಗ ಇಂದು ಮತ್ತೆ ದೇಶವನ್ನು ಉಳಿಸಲು ಸನ್ನದ್ದವಾಗಬೇಕು.ಕಳೆದ 10…
ಪವಾಡ ಪುರುಷ ಮಲೆ ಮಹದೇಶ್ವರ ಕೋಟಿ ಒಡೆಯನಾಗಿ ಮುಂದುವರೆಯುತ್ತಿದ್ದು, ಇದೀಗ 34 ದಿನಗಳ ಅಂತರದಲ್ಲಿ ಮೂರು ಕೋಟಿ ನಾಲ್ಕು ಲಕ್ಷದ…
ಅಶ್ಲೀಲ ವೀಡಿಯೋ ಪ್ರಕರಣ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದು, ಅವರಿಗೆ ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ…
ಉಡುಪಿ ಜಿಲ್ಲೆಯಾದ್ಯಂತ ಸಿ ಎನ್ ಜಿ ಬಂಕ್ ಗಳಲ್ಲಿ ಇಂಧನ ಕೊರತೆಯಿಂದ ರಿಕ್ಷಾ ಚಾಲಕರು ಗಂಟೆಗಟ್ಟಲೆ ಇಂಧನಕ್ಕಾಗಿ ಕಾಯುವ ಸನ್ನಿವೇಶ…
ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ…